1ಇಸ್ರಾಯೇಲಿನ ಮಕ್ಕಳಾದ ನೀವು ಕರ್ತನ ವಾಕ್ಯವನ್ನು ಕೇಳಿರಿ; ದೇಶದ ನಿವಾಸಿಗಳ ಸಂಗಡ ಕರ್ತನಿಗೆ ತರ್ಕವುಂಟು; ದೇಶದಲ್ಲಿ ಸತ್ಯವೂ ಇಲ್ಲ, ಕನಿಕರವೂ ಇಲ್ಲ, ಇಲ್ಲವೆ ದೇವರ ತಿಳುವಳಿ ಕೆಯೂ ಇಲ್ಲ.
2ಆಣೆಯಿಡುವದೂ ಸುಳ್ಳು ಹೇಳು ವದೂ ಕೊಲ್ಲುವದೂ ಕದಿಯುವದೂ ವ್ಯಭಿಚಾರ ಮಾಡುವದೂ ಹೆಚ್ಚಾಗಿಬಿಟ್ಟಿವೆ; ರಕ್ತಕ್ಕೆ ರಕ್ತ ಸೇರುತ್ತದೆ;
3ಆದದರಿಂದ ದೇಶವು ದುಃಖಪಡುವದು; ಅದರಲ್ಲಿ ವಾಸಿಸುವ ಪ್ರತಿಯೊಬ್ಬನೂ ಕುಗ್ಗಿ ಹೋಗುವನು; ಅಡವಿಯ ಮೃಗಗಳೂ ಆಕಾಶದ ಪಕ್ಷಿಗಳೂ ಸಮುದ್ರದ ವಿಾನುಗಳೂ ತೆಗೆದುಹಾಕಲ್ಪಡುವವು.
4ಆದಾಗ್ಯೂ ಯಾವನಾದರೂ ವಾದಿಸದಿರಲಿ ಇಲ್ಲವೆ ಬೇರೆಯವ ರನ್ನು ಖಂಡಿಸದಿರಲಿ; ನಿಮ್ಮ ಜನರೆಲ್ಲರೂ ಯಾಜಕ ನೊಂದಿಗೆ ವಾದಿಸುವವರ ಹಾಗಿದ್ದಾರೆ.
5ಆದದರಿಂದ ನೀನು ಹಗಲಿನಲ್ಲಿ ಬೀಳುವಿ; ಪ್ರವಾದಿಯೂ ನಿನ್ನ ಸಂಗಡ ರಾತ್ರಿಯಲ್ಲಿ ಬೀಳುವನು; ನಾನು ನಿನ್ನ ತಾಯಿ ಯನ್ನು ನಾಶ ಮಾಡುವೆನು.