25ನನ್ನ ಕೈಯನ್ನು ನಿನ್ನ ಕಡೆಗೆ ತಿರುಗಿಸಿ ಮಲಿನವನ್ನು ಸ್ವಚ್ಚವಾಗಿ ಶುದ್ಧಮಾಡಿ ನಿನ್ನ ಎಲ್ಲಾ ಕಲ್ಮಷವನ್ನು ತೆಗೆದು ಬಿಡುವೆನು.
26ನಿನ್ನ ನ್ಯಾಯಾಧಿಪತಿಗಳನ್ನು ಮುಂಚಿನ ಹಾಗೆಯೂ ನಿನ್ನ ಆಲೋಚನಾ ಪರರನ್ನು ಪ್ರಾರಂಭ ದಲ್ಲಿದ್ದ ಹಾಗೆಯೂ ತಿರಿಗಿ ಒದಗಿಸಿಕೊಡುವೆನು: ತರುವಾಯ ನೀನು ನೀತಿಯುಳ್ಳ ಪಟ್ಟಣವೆಂದೂ ನಂಬಿಗಸ್ತಿಕೆಯ ಪಟ್ಟಣವೆಂದೂ ಕರೆಯಲ್ಪಡುವಿ.
27ಚೀಯೋನು ನ್ಯಾಯತೀರ್ಪಿನಿಂದಲೂ ಅವಳ ಪರಿವರ್ತನೆಯನ್ನು ಹೊಂದಿದವರು ನೀತಿಯಿಂದಲೂ ಬಿಡುಗಡೆಯಾಗುವರು
28ಆದರೆ ದ್ರೋಹಿಗಳೂ ಪಾಪಿಗಳೂ ಒಟ್ಟಾಗಿ ನಾಶವಾಗುವರು ಮತ್ತು ಕರ್ತ ನನ್ನು ತೊರೆದವರು ದಹಿಸಲ್ಪಡುವರು.
29ನೀವು ಇಷ್ಟ ಪಟ್ಟ ಏಲಾಮರಗಳ ನಿಮಿತ್ತ ನಾಚಿಕೊಳ್ಳುವರು, ಆರಿಸಿಕೊಂಡ ವನಗಳ ವಿಷಯವಾಗಿ ಲಜ್ಜೆಪಡುವಿರಿ.