5ನೀವು ಹೆಚ್ಚೆಚ್ಚಾಗಿ ತಿರುಗಿಬಿದ್ದು ಯಾಕೆ ನೀವು ಇನ್ನು ಹೊಡೆಯಿಸಿಕೊಳ್ಳುತ್ತೀರಿ. ತಲೆ ಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.
6ಅಂಗಾ ಲಿನಿಂದ ನಡುನೆತ್ತಿಯ ವರೆಗೂ ಬಾಸುಂಡೆ ಪೆಟ್ಟು, ಮಾಗದ ಗಾಯಗಳೇ ಹೊರತು ಏನೂ ಸೌಖ್ಯವಿಲ್ಲ; ಅವುಗಳನ್ನು ಮುಚ್ಚಿಲ್ಲ, ಕಟ್ಟಿಲ್ಲ, ಇಲ್ಲವೆ ಎಣ್ಣೆ ಸವರಿ ಮೃದುಮಾಡಿಲ್ಲ.
7ನಿಮ್ಮ ದೇಶವು ಹಾಳಾಗಿದೆ; ನಿಮ್ಮ ಪಟ್ಟಣಗಳು ಬೆಂಕಿಯಿಂದ ಸುಟ್ಟುಹೋಗಿವೆ; ನಿಮ್ಮ ಭೂಮಿಯನ್ನು ಅನ್ಯರು ನಿಮ್ಮೆದುರಿಗೆ ನುಂಗಿ ಬಿಡು ತ್ತಿದ್ದಾರೆ. ಅದು ಅನ್ಯರಿಂದ ಕೆಡವಲ್ಪಟ್ಟಂತೆ ಹಾಳಾ ಗಿದೆ.
8ಚೀಯೋನ್ ಕುಮಾರಿಯು ದ್ರಾಕ್ಷೇತೋಟ ದಲ್ಲಿರುವ ಗುಡಿಸಲಿನ ಹಾಗೆಯೂ ಸೌತೆಯ ತೋಟ ದಲ್ಲಿರುವ ಮನೆಯ ಹಾಗೆಯೂ ಮುತ್ತಿಗೆ ಹಾಕಲಟ್ಟಿರುವ ಪಟ್ಟಣದ ಹಾಗೆಯೂ ಬಿಡಲ್ಪಟ್ಟಿದ್ದಾಳೆ.
9ಸೈನ್ಯ ಗಳ ಕರ್ತನು ನಮಗೆ ಮಿಕ್ಕಿದ್ದರಲ್ಲಿ ಸ್ವಲ್ಪವನ್ನಾದರೂ ಉಳಿಸದೆ ಹೋಗಿದ್ದರೆ, ಸೊದೋಮಿನ ಹಾಗೆಯೂ ಗೊಮೋರಕ್ಕೆ ಸಮಾನವಾಗಿಯೂ ಇರುತ್ತಿದ್ದೆವು.