1ಇಷಯನ ಬುಡದಿಂದ ಒಂದು ಕೊಂಬೆ ಒಡೆಯುವದು ಅದರ ಬೇರಿನಿಂದ ಕೊಂಬೆ ಯು ಬೆಳೆಯುವದು.
2ಅವನ ಮೇಲೆ ಜ್ಞಾನ ವಿವೇಕ ದಾಯಕ ಆತ್ಮ, ಆಲೋಚನಾ ಪರಾಕ್ರಮದ ಆತ್ಮ,ತಿಳುವಳಿಕೆಯ ಆತ್ಮ ಕರ್ತನ ಭಯದ ಆತ್ಮ, ಅಂತೂ ಕರ್ತನ ಆತ್ಮನು ನೆಲೆಯಾಗುವನು;
3ಕರ್ತನ ಭಯ ದಲ್ಲಿ ಅವನಿಗೆ ಸೂಕ್ಷ್ಮ ತಿಳುವಳಿಕೆಯು ಉಂಟಾ ಗುವದು; ಅವನು ಕಣ್ಣಿಗೆ ಕಂಡಂತೆ ತೀರ್ಪುಮಾಡು ವದಿಲ್ಲ, ಇಲ್ಲವೆ ತನ್ನ ಕಿವಿಗಳ ಕೇಳ್ವಿಕೆಯ ಪ್ರಕಾರ ತೀರ್ಪುಮಾಡನು;
4ಆದರೆ ಬಡವರಿಗೆ ನೀತಿಯಿಂದ ನ್ಯಾಯತೀರಿಸುವನು; ಭೂಮಿಯ ದೀನರಿಗೆ ನ್ಯಾಯ ವಾಗಿ ತೀರ್ಪುಮಾಡುವನು; ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ಹೊಡೆಯುವನು, ತನ್ನ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವನು.
5ನೀತಿಯೇ ಅವನಿಗೆ ನಡುಕಟ್ಟು, ನಂಬಿಗಸ್ತಿಕೆಯು ಅವನ ಸೊಂಟದ ಪಟ್ಟಿ.