8ಅವರ ದೇಶವು ವಿಗ್ರಹಗಳಿಂದಲೂ ತುಂಬಿದೆ; ತಮ್ಮ ಬೆರಳುಗಳಿಂದ ಮಾಡಿದ ತಮ್ಮ ಕೈಕೆಲಸವನ್ನೇ ಆರಾಧಿಸುವರು.
9ನೀಚನು ಹಿಗ್ಗಿಕೊಳ್ಳುತ್ತಾನೆ, ಉತ್ತಮನು ತಗ್ಗಿಸಿಕೊಳ್ಳು ತ್ತಾನೆ; ಆದಕಾರಣ ಅವರನ್ನು ಮನ್ನಿಸಬೇಡ.
10ಕರ್ತನ ಭಯಕ್ಕೂ ಆತನ ಮಹಿಮೆಯ ಘನತೆಗೂ ಬಂಡೆಗಳಲ್ಲಿ ಸೇರಿಕೋ, ದೂಳಿನಲ್ಲಿ ನೀನು ಅಡಗಿಕೋ.
11ಮನು ಷ್ಯನ ಅಹಂಭಾವದ ದೃಷ್ಟಿಯು ಕುಗ್ಗುವದು, ಮನು ಷ್ಯರ ಗರ್ವವು ತಗ್ಗುವದು, ಆಗ ಕರ್ತನೊಬ್ಬನೇ ಆ ದಿನದಲ್ಲಿ ಉನ್ನತನಾಗಿರುವನು.
12ಸೈನ್ಯಗಳ ಕರ್ತನ ದಿನವು ಗರ್ವ ಮತ್ತು ಅಹಂಭಾವದಿಂದ ತುಂಬಿರು ವವರ ಮೇಲೆಯೂ ತನ್ನನ್ನು ಹೆಚ್ಚಿಸಿಕೊಂಡಿರುವ ಪ್ರತಿಯೊಬ್ಬನ ಮೇಲೆಯೂ ಬರುವದು; ಆತನು ಅವರನ್ನು ತಗ್ಗಿಸುವನು.