ಯೆಶಾಯ 28

ಕುಡುಕರಾದ ಎಫ್ರಾ ಯೀಮ್ಯರ ಗರ್ವದ ಕಿರೀಟವು ಕಾಲಿನಿಂದ ತುಳಿಯ ಲ್ಪಡುವದು.

Isaiah 28:3 (UKJV) The crown of pride, the drunkards of Ephraim, shall be trodden under feet:

1ಎಫ್ರಾಯಾಮ್ಯರ ಕುಡುಕರ ಗರ್ವದ ಕಿರೀಟಕ್ಕೆ ಅಯ್ಯೋ! ದ್ರಾಕ್ಷಾರಸದಿಂದ ಅಮಲೇರಿದವರ ಕೊಬ್ಬುಳ್ಳ ತಗ್ಗಿನ ತಲೆಯ ಮೇಲಿ ರುವ ಅವರ ಅಹಂಕಾರದ ಕಿರೀಟವು ಬಾಡಿದ ಹೂವಾಗಿದೆ.

2ಇಗೋ, ಕರ್ತನಿಗೆ ಒಬ್ಬ ಮಹಾ ಬಲಿಷ್ಠನು ಇದ್ದಾನೆ. ಅವನು ರಭಸವಾಗಿ ಸುರಿಯುವ ಕಲ್ಮಳೆಯಂತೆಯೂ ಹೊಡೆದುಬಿಡುವ ಬಿರುಗಾಳಿ ಯಂತೆಯೂ ಪ್ರಳಯಮಾಡುವ ಪ್ರಚಂಡ ಮಳೆ ಯನ್ನು ತರುವ ಬಿರುಗಾಳಿಯಂತೆಯೂ ಅದನ್ನು ಕೈ ಯಿಂದ ನೆಲಕ್ಕೆ ಬೀಳಿಸುವನು.

3ಕುಡುಕರಾದ ಎಫ್ರಾ ಯೀಮ್ಯರ ಗರ್ವದ ಕಿರೀಟವು ಕಾಲಿನಿಂದ ತುಳಿಯ ಲ್ಪಡುವದು.

4ಫಲವತ್ತಾದ ತಗ್ಗಿನ ತಲೆಯ ಮೇಲಿರುವ ಬಾಡುವ ಹೂವಾದ ಅವರ ಅಲಂಕಾರದ ಶೃಂಗಾರವುಬೇಸಿಗೆ ಮುಂಚೆ ಹುಟ್ಟಿದ ಹಣ್ಣಿನ ಹಾಗೆ ಇರುವದು. ಅದನ್ನು ಕಂಡು ನೋಡಿದಾಕ್ಷಣವೇ ಕೈಗೆ ಸಿಕ್ಕಿದಾಗಲೇ ತಿಂದು ಬಿಡುವನು.

5ಆ ದಿನದಲ್ಲಿ ಸೈನ್ಯಗಳ ಕರ್ತನು ತನ್ನ ಜನರಲ್ಲಿ ಉಳಿದವರಿಗೆ ಮಹಿಮೆಯ ಕಿರೀಟವು ಮತ್ತು ಸುಂದರವಾದ ಮುಕಟವೂ ಆಗಿರುವನು.

Kannada Bible (Old Version), Bible Society of India.