ಯೆಶಾಯ 34

ಕರ್ತನು ಸಕಲ ಜನಾಂಗಗಳ ಮೇಲೆ ಕೋಪಮಾಡಿ ಅವುಗಳ ಎಲ್ಲಾ ಸೈನ್ಯಗಳ ಮೇಲೆ ರೋಷಗೊಂಡು ಅವರನ್ನು ಕೊಲೆಗೆ ಈಡುಮಾಡಿ ಸಂಪೂರ್ಣವಾಗಿ ನಾಶಮಾಡಿದ್ದಾನೆ.

Isaiah 34:2 (UKJV) For the indignation of the LORD is upon all nations, and his fury upon all their armies: he has utterly destroyed them, he has delivered them to the slaughter.

1ಜನಾಂಗಗಳೇ, ಕೇಳುವದಕ್ಕೆ ಹತ್ತಿರ ಬನ್ನಿರಿ; ಜನಗಳೇ ಕಿವಿಗೊಡಿರಿ, ಭೂಮಿ ಯೂ ಅದರಲ್ಲಿನ ಸಮಸ್ತವೂ ಲೋಕವೂ ಅದರ ಎಲ್ಲಾ ಹುಟ್ಟುವಳಿಯೂ ಕೇಳಲಿ.

2ಕರ್ತನು ಸಕಲ ಜನಾಂಗಗಳ ಮೇಲೆ ಕೋಪಮಾಡಿ ಅವುಗಳ ಎಲ್ಲಾ ಸೈನ್ಯಗಳ ಮೇಲೆ ರೋಷಗೊಂಡು ಅವರನ್ನು ಕೊಲೆಗೆ ಈಡುಮಾಡಿ ಸಂಪೂರ್ಣವಾಗಿ ನಾಶಮಾಡಿದ್ದಾನೆ.

3ಅವರಲ್ಲಿ ಕೊಂದುಹಾಕಲ್ಪಟ್ಟವರು ಬಿಸಾಡಲ್ಪಡು ವರು. ಅವರ ಹೆಣಗಳ ದುರ್ವಾಸನೆಯು ಮೇಲಕ್ಕೆ ಏರುವದು. ಅವರ ರಕ್ತಪ್ರವಾಹದಿಂದ ಪರ್ವತಗಳು ಕರಗಿಹೋಗುವವು.

4ಆಕಾಶದ ಸೈನ್ಯವೆಲ್ಲಾ ಗತಿಸಿ ಹೋಗುವದು. ಆಕಾಶಮಂಡಲವು ಸುರುಳಿಯಂತೆ ಸುತ್ತಿಕೊಳ್ಳುವದು, ದ್ರಾಕ್ಷೆಯ ಎಲೆ ಒಣಗಿ ಗಿಡದಿಂದ ಬೀಳುವಂತೆಯೂ ಅಂಜೂರ ಮರದಿಂದ ತರಗು ಉದುರುವ ಹಾಗೂ ಅವುಗಳ ಸೈನ್ಯವೆಲ್ಲಾ ಬಾಡಿ ಕೆಳಗೆ ಬೀಳುವದು.

Kannada Bible (Old Version), Bible Society of India.