4ಅದಕ್ಕೆ ಅವನು ಅವನನ್ನು--ಅವರು ನಿನ್ನ ಮನೆಯಲ್ಲಿ ಏನನ್ನು ನೋಡಿದರು ಎಂದು ಕೇಳಲು, ಹಿಜ್ಕೀಯನು--ನನ್ನ ಮನೆಯಲ್ಲಿರುವದೆಲ್ಲ ವನ್ನು ಅವರು ನೋಡಿದರು; ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದೆ ಇದ್ದದ್ದು ಏನೂ ಇರು ವದಿಲ್ಲ ಎಂದು ಉತ್ತರಕೊಟ್ಟನು.
5ತರುವಾಯ ಯೆಶಾಯನು ಹಿಜ್ಕೀಯನಿಗೆ--ಸೈನ್ಯಗಳ ಕರ್ತನ ವಾಕ್ಯ ವನ್ನು ಕೇಳು--
6ಇಗೋ, ನಿನ್ನ ಪೂರ್ವಿಕರ ಕಾಲದಿಂದ ಇಂದಿನ ವರೆಗೆ ನಿನ್ನ ಮನೆಯಲ್ಲಿ ಸಂಗ್ರಹವಾದ ದ್ದೆಲ್ಲವೂ ಬಾಬೆಲಿಗೆ ಒಯ್ಯಲ್ಪಡುವ ದಿವಸವು ಬರು ವದು. ಇಲ್ಲೇನೂ ಉಳಿಯುವದಿಲ್ಲ.
7ನಿನ್ನಿಂದ ಹುಟ್ಟುವಂಥ ನೀನು ಪಡೆದ ನಿನ್ನ ಮಕ್ಕಳನ್ನು ತೆಗೆದು ಕೊಂಡು ಹೋಗುವರು; ಬಾಬೆಲಿನ ಅರಸನ ಅರಮನೆ ಯಲ್ಲಿ ಅವರು ಕಂಚುಕಿಗಳಾಗಿರುವರು ಎಂದು ಕರ್ತನು ಹೇಳುತ್ತಾನೆ ಅಂದನು.
8ಆಗ ಹಿಜ್ಕೀಯನು--ಹೇಗೂ ನನ್ನ (ದಿನಗಳಲ್ಲಿ) ಜೀವಮಾನ ದಲ್ಲಿ ಸಮಾಧಾನವು ಸತ್ಯವು ಇರುವವು ಎಂದು ಅಂದುಕೊಂಡು ಯೆಶಾಯ ನಿಗೆ--ನೀನು ಹೇಳಿದ ಕರ್ತನ ವಾಕ್ಯವು ಒಳ್ಳೇದೆ ಅಂದನು.