ಯೆಶಾಯ 40

ಅದು ಪ್ರಭುಗಳನ್ನು ನಿರ್ನಾಮ ಮಾಡುತ್ತದೆ ಭೂಮಿಯ ನ್ಯಾಯಾಧಿಪತಿಗಳನ್ನು ಶೂನ್ಯವಾಗುವಂತೆ ಮಾಡು ತ್ತದೆ.

Isaiah 40:23 (UKJV) That brings the princes to nothing; he makes the judges of the earth as vanity.

21ನಿಮಗೆ ತಿಳಿದಿಲ್ಲವೋ? ನೀವು ಕೇಳಿಲ್ಲವೋ? ಆದಿಯಿಂದಲೇ ನಿಮಗೆ ತಿಳಿಸಲ್ಪಟ್ಟಿಲ್ಲವೋ? ಭೂಮಿ ಯು ಸ್ಥಾಪಿತವಾದಂದಿನಿಂದ ನಿಮಗೆ ಅರ್ಥವಾಗ ಲಿಲ್ಲವೋ?

22ಆಕಾಶ ಮಂಡಲವನ್ನು ತೆರೆಯಂತೆ ವಿಸ್ತರಿಸಿ ಅದರೊಳಗೆ ವಾಸಮಾಡುವ ಗುಡಾರದಂತೆ ಹರಡಿ ಭೂನಿವಾಸಿಗಳು ಮಿಡತೆಯಂತೆ ಕಾಣಿಸುವಷ್ಟು ಭೂವೃತ್ತದ ಮೇಲೆ ಕೂತಿರುವಾತನು ಆತನೇ.

23ಅದು ಪ್ರಭುಗಳನ್ನು ನಿರ್ನಾಮ ಮಾಡುತ್ತದೆ ಭೂಮಿಯ ನ್ಯಾಯಾಧಿಪತಿಗಳನ್ನು ಶೂನ್ಯವಾಗುವಂತೆ ಮಾಡು ತ್ತದೆ.

24ಹೌದು, ಅವರು ನೆಡಲ್ಪಡುವದಿಲ್ಲ ಬಿತ್ತ ಲ್ಪಡುವದಿಲ್ಲ. ಹೌದು ಅವರ ಬುಡವು ಭೂಮಿ ಯಲ್ಲಿ ಬೇರೂರುವದಿಲ್ಲ. ಆತನು ಶ್ವಾಸವನ್ನು ಅವರ ಮೇಲೆ ಊದಲು ಒಣಗಿಹೋಗುವರು. ಬಿರು ಗಾಳಿಯು ಅವರನ್ನು ಹೊಟ್ಟಿನಂತೆ ಬಡಿದುಕೊಂಡು ಹೋಗುವದು.

25ಹೀಗಿರಲು ನನ್ನನ್ನು ಯಾರಿಗೆ ಹೋಲಿಸಿ ಸರಿ ಸಮಾನ ಮಾಡುತ್ತೀರಿ ಎಂದು ಪರಿಶುದ್ಧನಾದವನು ಹೇಳುತ್ತಾನೆ.

Kannada Bible (Old Version), Bible Society of India.