26ಆತನು ನೀತಿವಂತನೆಂದು ನಾನು ತಿಳಿಯುವಂತೆ ಮತ್ತು ಹೇಳುವಂತೆ ಆದಿಯಲ್ಲಿ ಯಾರು ಅದನ್ನು ತಿಳಿಸಿದ್ದಾರೆ? ಹೌದು, ಯಾರೂ ತೋರಿಸು ವವನಿಲ್ಲ, ತಿಳಿಸುವವನು ಒಬ್ಬನೂ ಇಲ್ಲ. ನಿನ್ನ ಮಾತನ್ನೂ ಕೇಳುವವನು ಒಬ್ಬನೂ ಇಲ್ಲ.
27ನಾನು ಮೊದಲನೆಯವನಾಗಿ ಚೀಯೋನಿಗೆ ಇಗೋ, ಅವ ರನ್ನು ನೋಡು ಎಂದು ಹೇಳಿ, ಶುಭ ಸಮಾಚಾರ ತರತಕ್ಕವನನ್ನು ಯೆರೂಸಲೇಮಿಗೆ ಅನುಗ್ರಹಿಸುವೆನು.
28ನಾನು ನೋಡಿದಾಗ ಅಲ್ಲಿ ಯಾರೂ ಇಲ್ಲ; ನಾನು ಅವರನ್ನು ಕೇಳುವ ಪ್ರಶ್ನೆಗೆ ಅವರಲ್ಲಿ ಒಂದು ಮಾತನ್ನು ಉತ್ತರಿಸುವ ಸಲಹೆಗಾರನು ಇಲ್ಲವೇ ಇಲ್ಲ.
29ಇಗೋ, ಅವರೆಲ್ಲಾ ವ್ಯರ್ಥವೇ, ಅವರ ಕಾರ್ಯಗಳು ಶೂನ್ಯವೇ. ಅವರ ಕೆತ್ತಿದ ವಿಗ್ರಹಗಳು ಗಾಳಿ ಮತ್ತು ಗಲಿಬಿಲಿಯೇ.