ಯೆಶಾಯ 44

ಇಗೋ, ಅವನ ಸಂಗಡಿಗರೆಲ್ಲಾ ನಾಚಿಕೆಗೊಳಗಾಗುವರು; ಆ ಕೆಲಸ ದವರು ಮನುಷ್ಯ ಮಾತ್ರದವರೇ; ಅವರೆಲ್ಲರೂ ಒಟ್ಟುಗೂಡಿಕೊಂಡು ನಿಂತುಕೊಳ್ಳಲಿ, ಆದರೂ ಅವರು ಭಯಪಟ್ಟು ಒಟ್ಟಿಗೆ ಲಜ್ಜೆಪಡುವರು.

Isaiah 44:11 (UKJV) Behold, all his fellows shall be ashamed: and the workmen, they are of men: let them all be gathered together, let them stand up; yet they shall fear, and they shall be ashamed together.

9ಕೆತ್ತಿದ ವಿಗ್ರಹವನ್ನು ಮಾಡುವವರೆಲ್ಲರೂ ವ್ಯರ್ಥ ರೇ; ಅವರ ಮನೋರಂಜಕ ವಸ್ತುಗಳು ಯಾತಕ್ಕೂ ಬಾರವು; ಅವರು ನೋಡದೆ ಇಲ್ಲವೆ ತಿಳಿಯದೆ, ನಾಚಿಕೆಗೆ ಗುರಿಯಾಗುವಂತೆ ಅವುಗಳೇ ಅವರಿಗೆ ಸ್ವಂತ ಸಾಕ್ಷಿಗಳಾಗಿರುವವು.

10ದೇವರನ್ನು ರೂಪಿ ಸುವವರೂ ಇಲ್ಲವೆ ಕೆತ್ತಿದ ವ್ಯರ್ಥವಾದ ವಿಗ್ರಹವನ್ನು ಎರಕ ಹೊಯ್ಯುವವರು ಯಾರು?

11ಇಗೋ, ಅವನ ಸಂಗಡಿಗರೆಲ್ಲಾ ನಾಚಿಕೆಗೊಳಗಾಗುವರು; ಆ ಕೆಲಸ ದವರು ಮನುಷ್ಯ ಮಾತ್ರದವರೇ; ಅವರೆಲ್ಲರೂ ಒಟ್ಟುಗೂಡಿಕೊಂಡು ನಿಂತುಕೊಳ್ಳಲಿ, ಆದರೂ ಅವರು ಭಯಪಟ್ಟು ಒಟ್ಟಿಗೆ ಲಜ್ಜೆಪಡುವರು.

12ಕಮ್ಮಾ ರನು ಚಿಮಟದೊಂದಿಗೆ ಬೆಂಕಿಯಲ್ಲಿ ಕೆಲಸ ಮಾಡುತ್ತಾ ಚಮಟಿಗೆಯಿಂದ ಅದನ್ನು ಬಡಿದು ರೂಪಿಸಿ ತನ್ನ ತೋಳಿನ ಬಲದಿಂದ ಕೆಲಸ ಮಾಡುತ್ತಾನೆ; ಹೌದು, ಅವನು ಹಸಿದು ಬಲಹೀನನಾಗಿದ್ದರೂ ನೀರು ಕುಡಿ ಯದೆ ದಣಿಯುತ್ತಾನೆ.

13ಬಡಗಿಯು ನೂಲನ್ನು ಹಿಡಿದು ಗೆರೆ ಎಳೆದು ಬಾಚಿಯಿಂದ ಸಮಮಾಡಿ, ಕೈವಾರದಿಂದ ಗುರುತಿಸಿ, ಆಮೇಲೆ ಮನುಷ್ಯನ ಆಕಾ ರಕ್ಕೆ ತಂದು ಮನೆಯಲ್ಲಿ ವಾಸಿಸ ತಕ್ಕದ್ದಾಗಲೆಂದು ಮನುಷ್ಯನ ಅಂದದಂತೆ ರೂಪಿಸುವನು.

Kannada Bible (Old Version), Bible Society of India.