18ಓ, ನೀನು ನನ್ನ ಆಜ್ಞೆಗಳಿಗೆ ಕಿವಿಗೊಟ್ಟಿದ್ದರೆ ಚೆನ್ನಾಗಿತ್ತು! ಆಗ ನಿನ್ನ ಸಮಾಧಾನವು ನದಿಯಂತೆಯೂ ನಿನ್ನ ನೀತಿಯು ಸಮುದ್ರದ ಅಲೆಗಳಂತೆಯೂ ಇರುತ್ತಿದ್ದವು;
19ನಿನ್ನ ಸಂತಾನವು ಸಹ ಹರಳಿನಂತೆಯೂ ನಿನ್ನ ಹೊಟ್ಟೆಯಲ್ಲಿ ಹುಟ್ಟುವವರು ದಪ್ಪ ಮರಳಿನಂತೆಯೂ ಇರುವರು; ಅವರ ಹೆಸರು ತೆಗೆದುಹಾಕಲ್ಪಡದೆ ನನ್ನ ಸಮ್ಮುಖದಿಂದ ನಾಶವಾಗದೆ ಇರುತ್ತಿತ್ತು.
20ಬಾಬೆಲಿನಿಂದ ಹೊರಡಿರಿ, ಕಸ್ದೀಯರ ಕಡೆ ಯಿಂದ ಓಡಿಹೋಗಿರಿ; ಹರ್ಷ ಧ್ವನಿಯಿಂದ ಇದನ್ನು ಹೇಳಿ ಪ್ರಕಟಿಸಿರಿ, ಭೂಮಿಯ ಕಟ್ಟಕಡೆಯವರೆಗೂ ಪ್ರಚಾರಪಡಿಸಿರಿ; ಕರ್ತನು ತನ್ನ ಸೇವಕನಾದ ಯಾಕೋಬನನ್ನು ವಿಮೋಚಿಸಿದ್ದಾನೆಂದು ನೀವು ಹೇಳಿರಿ.
21ಆತನು ಅವರನ್ನು ಮರುಭೂಮಿಯಲ್ಲಿ ನಡೆಸಿದಾಗ ಅವರು ದಾಹಗೊಳ್ಳಲಿಲ್ಲ; ಅವರಿಗಾಗಿ ನೀರನ್ನು ಬಂಡೆಯೊಳಗಿಂದ ಹರಿಸಿದನು; ಆತನು ಬಂಡೆಯನ್ನು ಸೀಳಲು ನೀರು ರಭಸದಿಂದ ಹೊರಗೆ ಬಂತು;
22ದುಷ್ಟರಿಗೆ ಸಮಾಧಾನವೇ ಇಲ್ಲ ಎಂದು ಕರ್ತನು ನುಡಿಯುತ್ತಾನೆ.