11 ಓ ದ್ವೀಪ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ದೂರದ ಜನಗಳೇ, ಕಿವಿಗೊಡಿರಿ! ನಾನು ಗರ್ಭದಲ್ಲಿದ್ದಾಗಲೇ ಕರ್ತನು ನನ್ನನ್ನು ಕರೆ ದನು. ತಾಯಿಯ ಉದರದಲ್ಲಿದ್ದಂದಿನಿಂದಲೂ ನನ್ನ ಹೆಸರನ್ನು ಹೇಳುತ್ತಿದ್ದಾನೆ.
2ಆತನು ನನ್ನ ಬಾಯನ್ನು ಹರಿತವಾದ ಖಡ್ಗವನ್ನಾಗಿ ಮಾಡಿ, ತನ್ನ ಕೈ ನೆರಳಿನಲ್ಲಿ ನನ್ನನ್ನು ಮರೆಯಾಗಿಟ್ಟಿದ್ದಾನೆ; ಆತನು ನುಣುಪಾದ ಬಾಣವನ್ನಾಗಿ ನನ್ನನ್ನು ರೂಪಿಸಿ ತನ್ನ ಬತ್ತಳಿಕೆಯಲ್ಲಿ ಮುಚ್ಚಿಟ್ಟಿದ್ದಾನೆ.
3ಆತನು ನನಗೆ--ನೀನು ನನ್ನ ಸೇವಕನು, ನಾನು ಮಹಿಮೆ ಹೊಂದಬೇಕಾದ ಇಸ್ರಾಯೇಲೂ ಆಗಿದ್ದೀ ಎಂದು ಹೇಳಿದನು.
4ಅದಕ್ಕೆ ನಾನು--ನಾನು ಪಡುವ ಪ್ರಯಾಸವು ವ್ಯರ್ಥ, ನನ್ನ ಶಕ್ತಿಯನ್ನೆಲ್ಲಾ ನಿಷ್ಪ್ರಯೋಜನವಾಗಿಯೂ ವ್ಯರ್ಥವಾ ಗಿಯೂ ಕಳಕೊಂಡೆನೆಂದು ಹೇಳಿದೆನು. ಆದರೂ ನಿಶ್ಚಯವಾಗಿ ನನ್ನ ನ್ಯಾಯವು ಕರ್ತನ ಬಳಿಯಲ್ಲಿಯೂ ನನ್ನ ಪ್ರತಿಫಲವು ನನ್ನ ದೇವರಲ್ಲಿಯೂ ಉಂಟು.