22ಕರ್ತನಾದ ದೇವರು ಇಂತೆನ್ನುತ್ತಾನೆ--ಇಗೋ, ನಾನು ಅನ್ಯಜನಗಳ ಕಡೆಗೆ ಕೈ ಎತ್ತಿ ಜನರಿಗೆ ನನ್ನ ಧ್ವಜವನ್ನು ಎತ್ತುವೆನು; ಅವರು ನಿನ್ನ ಕುಮಾರರನ್ನು ಕೈಹಿಡಿದು ತರುವರು; ನಿನ್ನ ಕುಮಾರ್ತೆಯರನ್ನು ತಮ್ಮ ಹೆಗಲಮೇಲೆ ತರುವರು.
23ಅರಸುಗಳು ನಿನಗೆ ಸಾಕು ತಂದೆಗಳು, ಅವರ ರಾಣಿಯರು ನಿನಗೆ ದಾದಿಗಳಾ ಗುವರು; ಅವರು ಭೂಮಿಯ ಕಡೆಗೆ ತಮ್ಮ ಮುಖ ವನ್ನು ಬಾಗಿಸಿ, ಅಡ್ಡಬಿದ್ದು ನಿನ್ನ ಪಾದದ ಧೂಳನ್ನು ನೆಕ್ಕುವರು; ಆಗ ನಾನೇ ಕರ್ತನೆಂದು ನೀನು ತಿಳು ಕೊಳ್ಳುವಿ; ನನ್ನನ್ನು ನಿರೀಕ್ಷಿಸಿಕೊಂಡಿರುವವರು ನಾಚಿ ಕೆಗೆ ಈಡಾಗರು.
24ಶೂರನ ಕೈಯೊಳಗಿಂದ ಕೊಳ್ಳೆಯನ್ನು ತೆಗೆದು ಕೊಳ್ಳಬಹುದೋ? ಇಲ್ಲವೆ ನ್ಯಾಯವಾಗಿ ಸೆರೆಯವ ರನ್ನು ಬಿಡಿಸಬಹುದೋ?
25ಆದರೆ ಕರ್ತನು ಹೀಗ ನ್ನುತ್ತಾನೆ--ಶೂರನ ಸೆರೆಯವರು ತೆಗೆಯಲ್ಪಡುವರು; ಭಯಂಕರವಾದ ಕೊಳ್ಳೆಯು ಬಿಡಿಸಲ್ಪಡುವದು; ನಿನ್ನೊ ಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ನಾನು ರಕ್ಷಿಸುವೆನು.
26ನಿನ್ನ ಹಿಂಸಕರಿಗೆ ಅವರ ಮಾಂಸವನ್ನೇ ಅವರಿಗೆ ತಿನ್ನಿಸುವೆನು ಮತ್ತು ಸಿಹಿಯಾದ ದ್ರಾಕ್ಷಾರಸವನ್ನು ಕುಡಿಯುವಂತೆ ಅವರು ತಮ್ಮ ಸ್ವಂತ ರಕ್ತವನ್ನೇ ಕುಡಿಯುವರು. ಆಗ ಕರ್ತನಾದ ನಾನೇ ನಿನ್ನ ರಕ್ಷಕನೂ ನಿನ್ನ ವಿಮೋಚಕನೂ ಯಾಕೋಬ್ಯರ ಶೂರನೂ ಎಂದು ನರಜನ್ಮದವರೆ ಲ್ಲರಿಗೂ ಗೊತ್ತಾಗುವದು.