ಯೆಶಾಯ 5

ಅವನು ಅದಕ್ಕೆ ಬೇಲಿ ಹಾಕಿ, ಅದರೊಳಗಿಂದ ಕಲ್ಲುಗಳನ್ನು ಆರಿಸಿ ತೆಗೆದು ಹಾಕಿ ಒಳ್ಳೇ ದ್ರಾಕ್ಷೆಯನ್ನು ನೆಟ್ಟು, ಅದರ ಮಧ್ಯದಲ್ಲಿ ಒಂದು ಬುರುಜನ್ನು ಕಟ್ಟಿ, ದ್ರಾಕ್ಷೇ ತೊಟ್ಟಿಯನ್ನು ಕೊರೆಯಿಸಿ, ತೋಟವು ಒಳ್ಳೆ ದ್ರಾಕ್ಷೇ ಹಣ್ಣನ್ನು ಕೊಡುವದೆಂದು ಎದುರು ನೋಡು ತ್ತಿರಲು, ಅದು ಕಾಡುಹಣ್ಣನ್ನು ಬಿಟ್ಟಿತು.

Isaiah 5:2 (UKJV) And he fenced it, and gathered out the stones thereof, and planted it with the best vine, and built a tower in the midst of it, and also made a winepress therein: and he looked that it should bring forth grapes, and it brought forth wild grapes.

1ನನ್ನ ಪ್ರಿಯನ ದ್ರಾಕ್ಷೇ ತೋಟದ ವಿಷಯವಾದ ಹಾಡನ್ನು ನನ್ನ ಅತಿ ಪ್ರಿಯನಿಗೆ ನಾನು ಹಾಡುವೆನು. ಫಲವತ್ತಾದ ಗುಡ್ಡದಲ್ಲಿ ನನ್ನ ಅತಿಪ್ರಿಯನಿಗೆ ದ್ರಾಕ್ಷೆಯ ತೋಟವಿದೆ.

2ಅವನು ಅದಕ್ಕೆ ಬೇಲಿ ಹಾಕಿ, ಅದರೊಳಗಿಂದ ಕಲ್ಲುಗಳನ್ನು ಆರಿಸಿ ತೆಗೆದು ಹಾಕಿ ಒಳ್ಳೇ ದ್ರಾಕ್ಷೆಯನ್ನು ನೆಟ್ಟು, ಅದರ ಮಧ್ಯದಲ್ಲಿ ಒಂದು ಬುರುಜನ್ನು ಕಟ್ಟಿ, ದ್ರಾಕ್ಷೇ ತೊಟ್ಟಿಯನ್ನು ಕೊರೆಯಿಸಿ, ತೋಟವು ಒಳ್ಳೆ ದ್ರಾಕ್ಷೇ ಹಣ್ಣನ್ನು ಕೊಡುವದೆಂದು ಎದುರು ನೋಡು ತ್ತಿರಲು, ಅದು ಕಾಡುಹಣ್ಣನ್ನು ಬಿಟ್ಟಿತು.

3ಓ ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಮನುಷ್ಯರೇ, ನನಗೂ ನನ್ನ ದ್ರಾಕ್ಷೆಯ ತೋಟಕ್ಕೂ ನ್ಯಾಯತೀರಿಸಿರಿ ಎಂದು ನಿಮ್ಮನ್ನು ಪ್ರಾರ್ಥಿಸುತ್ತೇನೆ.

4ನನ್ನ ದ್ರಾಕ್ಷೇ ತೋಟದಲ್ಲಿ ನಾನು ಮಾಡಿದ್ದಕ್ಕಿಂತ ಇನ್ನೂ ಹೆಚ್ಚಾಗಿ ಅದಕ್ಕೆ ಏನು ಮಾಡಬೇಕಾಗಿತ್ತು? ಹೀಗಿರಲು ಅದು ಒಳ್ಳೇ ದ್ರಾಕ್ಷೇ ಫಲವನ್ನು ಫಲಿಸುವದೆಂದು ನಾನು ನಿರೀಕ್ಷಿಸುತ್ತಿರಲು ಅದು ಕಾಡುಹಣ್ಣನ್ನು ಕೊಟ್ಟಿದ್ದು ಯಾಕೆ?

Kannada Bible (Old Version), Bible Society of India.