ಯೆಶಾಯ 51

ಕರ್ತನ ಕೈಯಿಂದ ಆತನ ಉಗ್ರದ ಪಾತ್ರೆಯನ್ನು ಕುಡಿದ ಓ ಯೆರೂಸಲೇಮೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ಎದ್ದೇಳು; ನೀನು ತತ್ತರಗೊಳಿಸುವಂಥ ಪಾತ್ರೆಯಲ್ಲಿದ್ದ ಮಡ್ಡಿಯನ್ನು ಕುಡಿದು ಹೀರಿಬಿಟ್ಟಿದ್ದೀ.

Isaiah 51:17 (UKJV) Awake, awake, stand up, O Jerusalem, which have drunk at the hand of the LORD the cup of his fury; you have drunken the dregs of the cup of trembling, and wrung them out.

15ಆದರೆ ತೆರೆಗಳು ಭೋರ್ಗರೆಯುವಾಗ ಸಮುದ್ರವನ್ನು ವಿಭಾಗಿ ಸಿದ ನಿನ್ನ ದೇವರಾಗಿರುವ ಕರ್ತನು ನಾನೇ; ಸೈನ್ಯಗಳ ಕರ್ತನು ಎಂಬದು ಆತನ ಹೆಸರು.

16ಆಕಾಶಗಳನ್ನು ನಿಲ್ಲಿಸುವದಕ್ಕೂ ಭೂಮಿಗೆ ಅಸ್ತಿವಾರವನ್ನು ಹಾಕುವ ದಕ್ಕೂ ಚೀಯೋನಿಗೆ ನೀನು ನನ್ನ ಜನರೆಂದು ಹೇಳುವ ದಕ್ಕೂ ನನ್ನ ವಾಕ್ಯಗಳನ್ನು ನಿನ್ನ ಬಾಯಲ್ಲಿಟ್ಟು ನನ್ನ ಕೈ ನೆರಳಿನಿಂದ ನಿನ್ನನ್ನು ಮುಚ್ಚಿದ್ದೇನೆ.

17ಕರ್ತನ ಕೈಯಿಂದ ಆತನ ಉಗ್ರದ ಪಾತ್ರೆಯನ್ನು ಕುಡಿದ ಓ ಯೆರೂಸಲೇಮೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ಎದ್ದೇಳು; ನೀನು ತತ್ತರಗೊಳಿಸುವಂಥ ಪಾತ್ರೆಯಲ್ಲಿದ್ದ ಮಡ್ಡಿಯನ್ನು ಕುಡಿದು ಹೀರಿಬಿಟ್ಟಿದ್ದೀ.

18ಅವಳು ಹೆತ್ತ ಎಲ್ಲಾ ಕುಮಾರರಲ್ಲಿ ಅವಳನ್ನು ನಡಿಸುವದಕ್ಕೆ ಒಬ್ಬನೂ ಇಲ್ಲ; ಇಲ್ಲವೆ ಅವಳು ಬೆಳೆ ಸಿದ ಎಲ್ಲಾ ಕುಮಾರರಲ್ಲಿ ಅವಳ ಕೈಯನ್ನು ಹಿಡಿ ಯುವವನು ಒಬ್ಬನೂ ಇಲ್ಲ.

19ಈ ಎರಡು ಸಂಗತಿ ಗಳು ನಿನಗೆ ಸಂಭವಿಸಿವೆ; ನಿನಗೋಸ್ಕರ ಚಿಂತಿಸು ವವರು ಯಾರಿದ್ದಾರೆ? ನಾಶನವೋ ಸಂಹಾರವೋ ಕ್ಷಾಮವೋ ಕತ್ತಿಯೋ ನಾನು ಯಾರಿಂದ ನಿನ್ನನ್ನು ಆಧರಿಸಲಿ?

Kannada Bible (Old Version), Bible Society of India.