5ನನ್ನ ನೀತಿಯು ಸವಿಾಪಿ ಸಿತು; ನನ್ನ ರಕ್ಷಣೆಯು ಹೊರಟಿತು ಮತ್ತು ನನ್ನ ತೋಳುಗಳು ಜನರಿಗೆ ನ್ಯಾಯವನ್ನು ತೀರಿಸುವವು; ದ್ವೀಪಗಳವರು ನನ್ನ ತೋಳಿನ ಮೇಲೆ ಭರವಸವಿಟ್ಟು ನನಗೋಸ್ಕರ ಕಾದುಕೊಂಡಿರುತ್ತಾರೆ.
6ಆಕಾಶಗಳ ಕಡೆಗೆ ನಿಮ್ಮ ಕಣ್ಣುಗಳನ್ನು ಎತ್ತಿರಿ ಮತ್ತು ಕೆಳಗಿರುವ ಭೂಮಿಯನ್ನು ನೋಡಿರಿ. ಯಾಕಂದರೆ ಆಕಾಶಗಳು ಹೊಗೆಯಂತೆ ಅಗೋಚರವಾಗುವವು, ಭೂಮಿಯು ಹಳೆಯ ಬಟ್ಟೆಯಂತಾಗುವದು. ಅದರಲ್ಲಿ ವಾಸಿಸುವ ವರು ಅದೇ ರೀತಿಯಲ್ಲಿ ಸಾಯುವರು. ಆದರೆ ನನ್ನ ರಕ್ಷಣೆಯು ಶಾಶ್ವತವಾಗಿರುವದು ಮತ್ತು ನನ್ನ ನೀತಿಯು ಎಂದಿಗೂ ರದ್ದಾಗದು.
7ನೀತಿಯನ್ನು ಅರಿತು ನನ್ನ ನ್ಯಾಯಪ್ರಮಾಣವನ್ನು ಹೃದಯದಲ್ಲಿಟ್ಟು ಕೊಂಡಿರುವ ಜನರೇ, ನನಗೆ ಕಿವಿಗೊಡಿರಿ, ಮನುಷ್ಯರ ನಿಂದೆಗೆ ಭಯಪಡಬೇಡಿರಿ; ಇಲ್ಲವೆ ಅವರ ದೂಷಣೆಗೆ ಹೆದರ ಬೇಡಿರಿ.
8ನುಸಿಯು ಬಟ್ಟೆಯನ್ನು ತಿನ್ನುವಂತೆ ಅವರನ್ನು ತಿಂದುಬಿಡುವದು ಮತ್ತು ಹುಳವು ಅವರನ್ನು ಉಣ್ಣೆ ಯಂತೆ ತಿನ್ನುವದು; ಆದರೆ ನನ್ನ ನೀತಿಯು ಶಾಶ್ವತವಾಗಿ ರುವದು ಮತ್ತು ನನ್ನ ರಕ್ಷಣೆಯು ತಲತಲಾಂತರ ಗಳಿಗೂ ಇರುವದು.
9ಓ ಕರ್ತನ ತೋಳೇ, ಎಚ್ಚರಗೊಳ್ಳು, ಎಚ್ಚರ ಗೊಳ್ಳು, ಬಲವನ್ನು ಹೊಂದಿಕೋ; ಹಿಂದಿನ ಜನಾಂಗ ಗಳಲ್ಲಿ ಪೂರ್ವಕಾಲದ ದಿವಸಗಳಲ್ಲಿ ಎಚ್ಚರವಿದ್ದಂ ತೆಯೇ ಎಚ್ಚರವಾಗು. ರಹಬನ್ನು ಕಡಿದುಬಿಟ್ಟದ್ದೂ, ಘಟಸರ್ಪವನ್ನು ಗಾಯಪಡಿಸಿದ್ದೂ ನೀನಲ್ಲವೋ?