13ನಿನ್ನ ಮಕ್ಕಳೆಲ್ಲಾ ಕರ್ತನಿಂದ ಬೋಧಿಸಲ್ಪಡು ವರು; ನಿನ್ನ ಮಕ್ಕಳ ಸಮಾಧಾನವು ಅಧಿಕವಾಗಿರು ವದು.
14ನೀನು ನೀತಿಯಲ್ಲಿ ನೆಲೆಗೊಂಡಿರುವಿ; ಹಿಂಸೆ ಯಿಂದ ದೂರವಾಗಿರುವಿ; ನೀನು ಭೀತಿಯಿಂದ ಭಯ ಪಡುವದಿಲ್ಲ; ಅದು ನಿನ್ನ ಸವಿಾಪಕ್ಕೆ ಬಾರದು.
15ಇಗೋ, ನಿಶ್ಚಯವಾಗಿ ಅವರು ಒಟ್ಟಾಗಿ ಕೂಡಿ ಕೊಳ್ಳುವರು, ಆದರೆ ನನ್ನಿಂದಲ್ಲ; ನಿನಗೆ ವಿರೋಧವಾಗಿ ಯಾರ್ಯಾರು ಒಟ್ಟಾಗಿ ಕೂಡಿಕೊಳ್ಳುವರೋ ಅವರು ನಿನ್ನ ನಿಮಿತ್ತ ಕೆಡವಲ್ಪಡುವರು.
16ಇಗೋ, ಬೆಂಕಿಯಲ್ಲಿ ಕೆಂಡವನ್ನು ಊದುತ್ತಾ ತನ್ನ ಕೆಲಸಕ್ಕೆ ಆಯುಧಗ ಳನ್ನು ತರುವ ಕಮ್ಮಾರನನ್ನು ಸೃಷ್ಟಿಸಿದವನು ನಾನೇ; ನಾಶಮಾಡುವದಕ್ಕೆ ಕೆಡಿಸುವವನನ್ನು ಸೃಷ್ಟಿಸಿದವನು ನಾನೇ.
17ನಿನಗೆ ವಿರೋಧವಾಗಿ ರೂಪಿಸಲ್ಪಟ್ಟ ಆಯು ಧಗಳು ಸಫಲವಾಗುವದಿಲ್ಲ; ನಿನಗೆ ವಿರೋಧವಾಗಿ ನಿಂತುಕೊಳ್ಳುವ ಪ್ರತಿಯೊಂದು ನಾಲಿಗೆಯನ್ನು ನ್ಯಾಯ ತೀರ್ಪಿನಲ್ಲಿ ನೀನು ಖಂಡಿಸುವಿ. ಇದೇ ಕರ್ತನ ಸೇವ ಕರ ಬಾಧ್ಯತೆಯೂ ಮತ್ತು ಅವರ ನೀತಿಯೂ ನನ್ನದೇ ಎಂದು ಕರ್ತನು ಹೇಳುತ್ತಾನೆ.