ಯೆಶಾಯ 54

ನಿನ್ನ ಗುಡಾರದ ಸ್ಥಳವನ್ನು ವಿಸ್ತರಿಸು ನಿನ್ನ ನಿವಾಸದ ಪರದೆಗಳು ಹರಡಲಿ; ಹಿಂತೆ ಗೆಯಬೇಡ; ನಿನ್ನ ಹಗ್ಗಗಳನ್ನು ಉದ್ದ ಮಾಡಿ ಗೂಟ ಗಳನ್ನು ಬಲಪಡಿಸು.

Isaiah 54:2 (UKJV) Enlarge the place of your tent, and let them stretch forth the curtains of yours habitations: spare not, lengthen your cords, and strengthen your stakes;

1ಓ ಹೆರದವಳೇ, ನೀನು ಹರ್ಷಧ್ವನಿಗೈ! ಪ್ರಸವವೇದನೆಯನ್ನನುಭವಿಸದವಳೇ, ಆನಂದ ಸ್ವರವನ್ನೆತ್ತಿ ಗಟ್ಟಿಯಾಗಿ ಕೂಗು! ಮದುವೆ ಯಾದವಳಿಗಿಂತ ಆಗದವಳಿಗೆ ಮಕ್ಕಳು ಹೆಚ್ಚು ಎಂದು ಕರ್ತನು ಹೇಳುತ್ತಾನೆ.

2ನಿನ್ನ ಗುಡಾರದ ಸ್ಥಳವನ್ನು ವಿಸ್ತರಿಸು ನಿನ್ನ ನಿವಾಸದ ಪರದೆಗಳು ಹರಡಲಿ; ಹಿಂತೆ ಗೆಯಬೇಡ; ನಿನ್ನ ಹಗ್ಗಗಳನ್ನು ಉದ್ದ ಮಾಡಿ ಗೂಟ ಗಳನ್ನು ಬಲಪಡಿಸು.

3ನೀನು ಬಲಗಡೆಗೂ ಎಡ ಗಡೆಗೂ ಹಬ್ಬಿಕೊಳ್ಳುವಿ; ನಿನ್ನ ಸಂತಾನವು ಅನ್ಯ ಜನಾಂಗಗಳನ್ನು ವಶಪಡಿಸಿಕೊಂಡು ಹಾಳಾದ ಪಟ್ಟಣ ಗಳನ್ನು ನಿವಾಸವಾಗಮಾಡುವದು.

4ಹೆದರಬೇಡ, ನಿನಗೆ ನಾಚಿಕೆಯಾಗುವದಿಲ್ಲ. ಇಲ್ಲವೆ ಗಾಬರಿ ಪಡಬೇಡ, ನಿನ್ನ ಯೌವನದ ಲಜ್ಜೆಯನ್ನು ಮರೆತು ಬಿಡುವಿ ನಿನ್ನ ವೈಧವ್ಯದಲ್ಲಿ ನಿನಗಾದ ನಿಂದೆಯನ್ನು ಎಂದಿಗೂ ನಿನ್ನ ಜ್ಞಾಪಕಕ್ಕೆ ತರುವದಿಲ್ಲ.

Kannada Bible (Old Version), Bible Society of India.