9ಅರಣ್ಯದ ಸಕಲ ಮೃಗಗಳೇ, ಹೌದು, ಕಾಡಿನ ಎಲ್ಲಾ ಮೃಗಗಳೇ, ನುಂಗಿಬಿಡುವದಕ್ಕೆ ಬನ್ನಿರಿ.
10ಅವನ ಕಾವಲುಗಾರರು ಕುರುಡರು, ಅವರೆಲ್ಲರೂ ತಿಳುವಳಿಕೆ ಯಿಲ್ಲದವರು; ಅವರೆಲ್ಲರೂ ಮೂಕ ನಾಯಿಗಳು; ಅವು ಬೊಗಳಲಾರವು, ನಿದ್ರಿಸುತ್ತವೆ, ಬಿದ್ದುಕೊಂಡಿ ರುತ್ತವೆ. ತೂಕಡಿಕೆಯನ್ನು ಪ್ರೀತಿಸುತ್ತವೆ.
11ಹೌದು, ಎಂದಿಗೂ ಸಾಕೆನ್ನದ ಹೊಟ್ಟೇಬಾಕ ನಾಯಿಗಳು, ಅವರು ಗ್ರಹಿಕೆಯಿಲ್ಲದ ಕುರುಬರು; ಅವರೆಲ್ಲರು ತಮ್ಮ ತಮ್ಮ ಸ್ವಂತ ಮಾರ್ಗಕ್ಕೂ ಪ್ರತಿಯೊಬ್ಬನು ತನಗೆ ಲಾಭ ಸಿಕ್ಕುವ ಕಡೆಗೂ ತಿರುಗಿ ಕೊಳ್ಳುವನು.
12ಬನ್ನಿರಿ, ನಾನು ದ್ರಾಕ್ಷಾರಸವನ್ನು ತರುವೆನು; ನಮ್ಮನ್ನು ನಾವೇ ಅಮಲೇರುವ ಮದ್ಯದಿಂದ ತುಂಬಿಸಿ ಕೊಳ್ಳುವ! ನಾಳೆಯು ಈ ದಿವಸದಂತೆಯೇ ಬಹಳ ಸಮೃದ್ಧಿಯಾಗಿರುವದು.