ಯೆಶಾಯ 6

ಅದರ ಮೇಲೆ ಸೆರಾಫಿಯರು ನಿಂತಿದ್ದರು! ಪ್ರತಿಯೊಬ್ಬನಿಗೂ ಆರು ರೆಕ್ಕೆಗಳಿದ್ದವು, ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು, ಇನ್ನೆರಡು ರೆಕ್ಕೆಗಳಿಂದ ಹಾರುತ್ತಿದ್ದನು.

Isaiah 6:2 (UKJV) Above it stood the seraphims: each one had six wings; with two he covered his face, and with two he covered his feet, and with two he did fly.

1ಅರಸನಾದ ಉಜ್ಜೀಯನು ಮರಣ ಹೊಂದಿದ ವರುಷದಲ್ಲಿ ಕರ್ತನು ಉನ್ನ ತೋನ್ನತವಾಗಿ ಸಿಂಹಾಸನಾರೂಢನಾಗಿರುವದನ್ನು ಕಂಡೆನು. ಆತನ ವಸ್ತ್ರದ ನೆರಿಗೆಯು ಮಂದಿರದಲ್ಲೆಲ್ಲಾ ಹರಡಿತ್ತು.

2ಅದರ ಮೇಲೆ ಸೆರಾಫಿಯರು ನಿಂತಿದ್ದರು! ಪ್ರತಿಯೊಬ್ಬನಿಗೂ ಆರು ರೆಕ್ಕೆಗಳಿದ್ದವು, ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು, ಇನ್ನೆರಡು ರೆಕ್ಕೆಗಳಿಂದ ಹಾರುತ್ತಿದ್ದನು.

3ಒಬ್ಬನು ಮತ್ತೊಬ್ಬನಿಗೆ--ಸೈನ್ಯಗಳ ಕರ್ತನು ಪರಿ ಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲ ವೆಲ್ಲಾ ಆತನ ಮಹಿಮೆಯಿಂದ ತುಂಬಿಯದೆ ಎಂದು ಕೂಗಿ ಹೇಳಿದನು.

4ಕೂಗುವವನ ಸ್ವರಕ್ಕೆ ದ್ವಾರದ ನಿಲುವುಗಳು ಕದಲಿದವು, ಆಲಯವು ಧೂಮದಿಂದ ತುಂಬಿತ್ತು.

Kannada Bible (Old Version), Bible Society of India.