2ಅದರ ಮೇಲೆ ಸೆರಾಫಿಯರು ನಿಂತಿದ್ದರು! ಪ್ರತಿಯೊಬ್ಬನಿಗೂ ಆರು ರೆಕ್ಕೆಗಳಿದ್ದವು, ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು, ಇನ್ನೆರಡು ರೆಕ್ಕೆಗಳಿಂದ ಹಾರುತ್ತಿದ್ದನು.
3ಒಬ್ಬನು ಮತ್ತೊಬ್ಬನಿಗೆ--ಸೈನ್ಯಗಳ ಕರ್ತನು ಪರಿ ಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲ ವೆಲ್ಲಾ ಆತನ ಮಹಿಮೆಯಿಂದ ತುಂಬಿಯದೆ ಎಂದು ಕೂಗಿ ಹೇಳಿದನು.
4ಕೂಗುವವನ ಸ್ವರಕ್ಕೆ ದ್ವಾರದ ನಿಲುವುಗಳು ಕದಲಿದವು, ಆಲಯವು ಧೂಮದಿಂದ ತುಂಬಿತ್ತು.
5ಆಗ ನಾನು--ಅಯ್ಯೋ, ನಾನು ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು, ನಾನು ಹೊಲಸು ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು; ಆದರೂ ಸೈನ್ಯಗಳ ಕರ್ತನಾದ ಅರಸನನ್ನು ನನ್ನ ಕಣ್ಣುಗಳು ಕಂಡವಲ್ಲಾ ಅಂದೆನು.
6ಆಗ ಸೆರಾಫಿಯರಲ್ಲಿ ಒಬ್ಬನು ತಂಡಸದಿಂದ ಯಜ್ಞವೇದಿಯಲ್ಲಿರುವ ಕೆಂಡವನ್ನು ಕೈಯಲ್ಲಿ ಹಿಡಿದುಕೊಂಡು ಹಾರಿಬಂದು