ಯೆಶಾಯ 62

ಹಾದುಹೋಗಿರಿ, ಬಾಗಿಲುಗಳನ್ನು ಹಾದು ಹೋಗಿರಿ. ಜನರಿಗೆ ದಾರಿಯನ್ನು ಸಿದ್ಧಮಾಡಿರಿ; ಎತ್ತರ ಮಾಡಿರಿ, ರಾಜ ಮಾರ್ಗವನ್ನು ಎತ್ತರಮಾಡಿರಿ; ಕಲ್ಲುಗಳನ್ನು ಆಯ್ದು ಕೂಡಿಸಿರಿ; ಜನಗಳಿಗೋಸ್ಕರ ಧ್ವಜವನ್ನು ಎತ್ತಿರಿ.

Isaiah 62:10 (UKJV) Go through, go through the gates; prepare all of you the way of the people; cast up, cast up the highway; gather out the stones; lift up a standard for the people.

8ಕರ್ತನು ತನ್ನ ಬಲಗೈ ಯಿಂದಲೂ ತನ್ನ ತ್ರಾಣವುಳ್ಳ ತೋಳಿನಿಂದಲೂ ಆಣೆ ಯಿಟ್ಟುಕೊಂಡದ್ದೇನಂದರೆ--ನಿಶ್ಚಯವಾಗಿ ನಾನು ಇನ್ನು ಮೇಲೆ ನಿನ್ನ ಧಾನ್ಯಗಳನ್ನು ನಿನ್ನ ಶತ್ರುಗಳಿಗೆ ಆಹಾರವಾಗಿ ಕೊಡುವದಿಲ್ಲ, ಮತ್ತು ನೀನು ಕಷ್ಟಪಟ್ಟು ಮಾಡಿದ ನಿನ್ನ ದ್ರಾಕ್ಷಾರಸವನ್ನು ಅನ್ಯರ ಪುತ್ರರು ಕುಡಿಯುವದಿಲ್ಲ;

9ಆದರೆ ಅದನ್ನು ಕೂಡಿಸಿದವರು ಅದನ್ನು ತಿಂದು ಕರ್ತನನ್ನು ಸ್ತುತಿಸುವರು; ಅದನ್ನು ಸೇರಿಸಿ ತಂದವರು ನನ್ನ ಪರಿಶುದ್ಧ ಅಂಗಳಗಳಲ್ಲಿ ಅದನ್ನು ಕುಡಿಯುವರು.

10ಹಾದುಹೋಗಿರಿ, ಬಾಗಿಲುಗಳನ್ನು ಹಾದು ಹೋಗಿರಿ. ಜನರಿಗೆ ದಾರಿಯನ್ನು ಸಿದ್ಧಮಾಡಿರಿ; ಎತ್ತರ ಮಾಡಿರಿ, ರಾಜ ಮಾರ್ಗವನ್ನು ಎತ್ತರಮಾಡಿರಿ; ಕಲ್ಲುಗಳನ್ನು ಆಯ್ದು ಕೂಡಿಸಿರಿ; ಜನಗಳಿಗೋಸ್ಕರ ಧ್ವಜವನ್ನು ಎತ್ತಿರಿ.

11ಇಗೋ, ಕರ್ತನು ಭೂಮಿಯ ಅಂತ್ಯದ ವರೆಗೆ ಪ್ರಕಟಿಸಿದ್ದಾನೆ. ಚೀಯೋನಿನ ಕುಮಾ ರಿಯೇ--ಇಗೋ, ನಿನ್ನ ರಕ್ಷಣೆಯು ಬರುತ್ತದೆ; ಆತನ ಬಹುಮಾನವು ಆತನ ಸಂಗಡವೂ ಆತನ ಕೆಲಸವು ಆತನ ಮುಂದೆಯೂ ಅದೆ ಎಂದು ಹೇಳಿರಿ.

12ಆಗ ಅವರು--ಪರಿಶುದ್ಧ ಜನರೂ ಕರ್ತನು ವಿಮೋಚಿಸಿದ ವರೂ ಎಂದು ಕರೆಯಲ್ಪಡುವರು; ನೀನು ಕಂಡು ಕೊಳ್ಳಲ್ಪಟ್ಟವಳೂ ತೊರೆಯಲ್ಪಡದ ಪಟ್ಟಣವೂ ಎಂದು ಕರೆಯಲ್ಪಡುವಿ.

Kannada Bible (Old Version), Bible Society of India.