ಯೆಶಾಯ 62

ಆದರೆ ಅದನ್ನು ಕೂಡಿಸಿದವರು ಅದನ್ನು ತಿಂದು ಕರ್ತನನ್ನು ಸ್ತುತಿಸುವರು; ಅದನ್ನು ಸೇರಿಸಿ ತಂದವರು ನನ್ನ ಪರಿಶುದ್ಧ ಅಂಗಳಗಳಲ್ಲಿ ಅದನ್ನು ಕುಡಿಯುವರು.

Isaiah 62:9 (UKJV) But they that have gathered it shall eat it, and praise the LORD; and they that have brought it together shall drink it in the courts of my holiness.

7ಆತನು ಯೆರೂಸಲೇಮನ್ನು ಸ್ಥಾಪಿಸಿ ಅದು ಭೂಮಿಯಲ್ಲಿ ಸ್ತುತಿಸಲ್ಪಡುವಂತೆ ಮಾಡುವವರೆಗೂ ಆತನಿಗೆ ವಿಶ್ರಾಂತಿ ಕೊಡಬೇಡಿರಿ.

8ಕರ್ತನು ತನ್ನ ಬಲಗೈ ಯಿಂದಲೂ ತನ್ನ ತ್ರಾಣವುಳ್ಳ ತೋಳಿನಿಂದಲೂ ಆಣೆ ಯಿಟ್ಟುಕೊಂಡದ್ದೇನಂದರೆ--ನಿಶ್ಚಯವಾಗಿ ನಾನು ಇನ್ನು ಮೇಲೆ ನಿನ್ನ ಧಾನ್ಯಗಳನ್ನು ನಿನ್ನ ಶತ್ರುಗಳಿಗೆ ಆಹಾರವಾಗಿ ಕೊಡುವದಿಲ್ಲ, ಮತ್ತು ನೀನು ಕಷ್ಟಪಟ್ಟು ಮಾಡಿದ ನಿನ್ನ ದ್ರಾಕ್ಷಾರಸವನ್ನು ಅನ್ಯರ ಪುತ್ರರು ಕುಡಿಯುವದಿಲ್ಲ;

9ಆದರೆ ಅದನ್ನು ಕೂಡಿಸಿದವರು ಅದನ್ನು ತಿಂದು ಕರ್ತನನ್ನು ಸ್ತುತಿಸುವರು; ಅದನ್ನು ಸೇರಿಸಿ ತಂದವರು ನನ್ನ ಪರಿಶುದ್ಧ ಅಂಗಳಗಳಲ್ಲಿ ಅದನ್ನು ಕುಡಿಯುವರು.

10ಹಾದುಹೋಗಿರಿ, ಬಾಗಿಲುಗಳನ್ನು ಹಾದು ಹೋಗಿರಿ. ಜನರಿಗೆ ದಾರಿಯನ್ನು ಸಿದ್ಧಮಾಡಿರಿ; ಎತ್ತರ ಮಾಡಿರಿ, ರಾಜ ಮಾರ್ಗವನ್ನು ಎತ್ತರಮಾಡಿರಿ; ಕಲ್ಲುಗಳನ್ನು ಆಯ್ದು ಕೂಡಿಸಿರಿ; ಜನಗಳಿಗೋಸ್ಕರ ಧ್ವಜವನ್ನು ಎತ್ತಿರಿ.

11ಇಗೋ, ಕರ್ತನು ಭೂಮಿಯ ಅಂತ್ಯದ ವರೆಗೆ ಪ್ರಕಟಿಸಿದ್ದಾನೆ. ಚೀಯೋನಿನ ಕುಮಾ ರಿಯೇ--ಇಗೋ, ನಿನ್ನ ರಕ್ಷಣೆಯು ಬರುತ್ತದೆ; ಆತನ ಬಹುಮಾನವು ಆತನ ಸಂಗಡವೂ ಆತನ ಕೆಲಸವು ಆತನ ಮುಂದೆಯೂ ಅದೆ ಎಂದು ಹೇಳಿರಿ.

Kannada Bible (Old Version), Bible Society of India.