ಯೆಶಾಯ 64

ಓ ಕರ್ತನೇ, ಅತ್ಯಧಿಕ ವಾಗಿ ರೌದ್ರನಾಗಬೇಡ; ಎಂದೆಂದಿಗೂ ಅಕ್ರಮ ವನ್ನು ಜ್ಞಾಪಕಮಾಡಬೇಡ; ಇಗೋ, ನೋಡು, ನಾವು ಬೇಡುತ್ತೇವೆ ದೃಷ್ಟಿಯಿಡು; ನಾವೆಲ್ಲರೂ ನಿನ್ನ ಜನರೇ.

Isaiah 64:9 (UKJV) Be not angry very sore, O LORD, neither remember iniquity for ever: behold, see, we plead to you, we are all your people.

7ನಿನ್ನ ಹೆಸರನ್ನು ಕರೆಯುವವನೂ ನಿನ್ನನ್ನು ಹಿಡು ಕೊಳ್ಳುವದಕ್ಕೆ ತನ್ನನ್ನು ಪ್ರೇರಿಸಿಕೊಳ್ಳುವವನು ಒಬ್ಬನೂ ಇಲ್ಲ; ನಿನ್ನ ಮುಖವನ್ನು ನಮಗೆ ಮರೆಮಾಡಿದ್ದೀ; ನಮ್ಮ ಅಕ್ರಮಗಳಿಗಾಗಿ ನಮ್ಮನ್ನು ದಹಿಸಿಬಿಟ್ಟಿದ್ದೀ.

8ಆದರೆ ಈಗ ಓ ಕರ್ತನೇ, ನಮ್ಮ ತಂದೆಯು ನೀನೇ; ನಾವು ಮಣ್ಣು, ನೀನು ನಮ್ಮ ಕುಂಬಾರನು; ನಾವೆ ಲ್ಲರೂ ನಿನ್ನ ಕೈಕೆಲಸವೇ.

9ಓ ಕರ್ತನೇ, ಅತ್ಯಧಿಕ ವಾಗಿ ರೌದ್ರನಾಗಬೇಡ; ಎಂದೆಂದಿಗೂ ಅಕ್ರಮ ವನ್ನು ಜ್ಞಾಪಕಮಾಡಬೇಡ; ಇಗೋ, ನೋಡು, ನಾವು ಬೇಡುತ್ತೇವೆ ದೃಷ್ಟಿಯಿಡು; ನಾವೆಲ್ಲರೂ ನಿನ್ನ ಜನರೇ.

10ನಿನ್ನ ಪರಿಶುದ್ಧ ಪಟ್ಟಣಗಳು ಅಡವಿ ಯಾದವು; ಚೀಯೋನು ಅಡವಿಯಾಯಿತು; ಯೆರೂ ಸಲೇಮು ಹಾಳಾಯಿತು.

11ನಮ್ಮ ತಂದೆಗಳು ನಿನ್ನನ್ನು ಕೊಂಡಾಡಿದ ನಮ್ಮ ಪರಿಶುದ್ಧ ಮತ್ತು ಸುಂದರ ವಾದ ಮನೆ ಬೆಂಕಿಯಿಂದ ಸುಟ್ಟುಹೋಯಿತು; ನಮ್ಮ ಸೊಗಸಾದವುಗಳೆಲ್ಲಾ ನಾಶವಾದವು.

Kannada Bible (Old Version), Bible Society of India.