1ಕೇಳದವರಿಂದ ನಾನು ವಿಚಾರಿಸಲ್ಪಟ್ಟಿದ್ದೇನೆ, ನನ್ನನ್ನು ಹುಡುಕದವರಿಗೂ ಕಂಡು ಕೊಳ್ಳಲ್ಪಟ್ಟಿದ್ದೇನೆ; ನನ್ನ ಹೆಸರಿನಿಂದ ಕರೆಯಲ್ಪಡದ ಜನಾಂಗಕ್ಕೆ--ಇಗೋ, ಇದ್ದೇನೆ; ಇಗೋ, ಇದ್ದೇನೆ ಎಂದು ಹೇಳಿದೆನು.
2ಒಳ್ಳೇದಲ್ಲದ ಮಾರ್ಗದಲ್ಲಿ ತಮ್ಮ ಆಲೋಚನೆಗಳ ಪ್ರಕಾರ ನಡೆದುಕೊಂಡು ತಿರುಗಿ ಬೀಳುವ ಜನರಿಗೆ ಹಗಲೆಲ್ಲಾ ನನ್ನ ಕೈಗಳನ್ನು ಚಾಚಿದ್ದೇನೆ.
3ಇವರು ಯಾವಾಗಲೂ ನನ್ನ ಮುಖದೆ ದುರಿಗೆ ನನಗೆ ಕೋಪೋದ್ರೇಕವನ್ನು ಎಬ್ಬಿಸುವ ಜನರು; ತೋಟಗಳಲ್ಲಿ ಬಲಿ ಅರ್ಪಿಸಿ, ಇಟ್ಟಿಗೆಯ ಯಜ್ಞವೇದಿಯ ಮೇಲೆ ಧೂಪ ಸುಡುವರು;
4ಸಮಾ ಧಿಗಳಲ್ಲಿ ಉಳಿದು ಗವಿಗಳಲ್ಲಿ ತಂಗುವವರು; ಹಂದಿ ಯ ಮಾಂಸವನ್ನು ತಿನ್ನುವವರು ತಮ್ಮ ಪಾತ್ರೆಗಳಲ್ಲಿ ಅಸಹ್ಯವಾದವುಗಳ ಸಾರುಳ್ಳವರು; ಅವರು--
5ನಿನ್ನ ಷ್ಟಕ್ಕೆ ನೀನೇ ನಿಂತುಕೋ, ನನ್ನ ಬಳಿಗೆ ಬರಬೇಡ, ಯಾಕಂದರೆ ನಿನಗಿಂತ ನಾನು ಪರಿಶುದ್ಧನಾಗಿದ್ದೇ ನೆಂದು ಹೇಳುವವರು; ಇವರು ನನ್ನ ಮೂಗಿನಲ್ಲಿ ಹೊಗೆಯಾಗಿಯೂ ಹಗಲೆಲ್ಲಾ ಉರಿಯುವ ಬೆಂಕಿ ಯಾಗಿಯೂ ಇದ್ದಾರೆ.