22ನಾನು ಉಂಟು ಮಾಡುವ ಹೊಸ ಆಕಾಶವೂ ಹೊಸ ಭೂಮಿಯೂ ನನ್ನ ಮುಂದೆ ನೆಲೆಯಾಗಿರುವ ಪ್ರಕಾರವೇ ನಿಮ್ಮ ಸಂತಾನವೂ ನಿಮ್ಮ ಹೆಸರೂ ನೆಲೆಯಾಗಿರುವದೆಂದು ಕರ್ತನು ಅನ್ನುತ್ತಾನೆ.
23ಇದಾದ ಮೇಲೆ ಒಂದು ಅಮಾವಾಸ್ಯೆಯಿಂದ ಇನ್ನೊಂದಕ್ಕೂ ಒಂದು ಸಬ್ಬತ್ತಿನಿಂದ ಇನ್ನೊಂದಕ್ಕೂ ಮನುಷ್ಯರೆಲ್ಲಾ ನನ್ನ ಮುಂದೆ ಆರಾಧಿಸುವದಕ್ಕೆ ಬರುವರೆಂದು ಕರ್ತನು ಹೇಳುತ್ತಾನೆ.
24ಅವರು ಮುಂದೆ ಹೋಗಿ ನನಗೆ ವಿರೋಧವಾಗಿ ದ್ರೋಹ ಮಾಡಿದ ಮನುಷ್ಯರ ಹೆಣಗಳನ್ನು ನೋಡುವರು; ಯಾಕಂದರೆ ಅವರ ಹುಳ ಸಾಯುವದಿಲ್ಲ; ಅವರ ಬೆಂಕಿ ಆರುವದಿಲ್ಲ; ಅವರು ಎಲ್ಲಾ ಮನುಷ್ಯರಿಗೆ ಹೇಸಿಕೆಯಾಗುವರು.