ಯೆಶಾಯ 8

ಆತನೇ ಪರಿಶುದ್ಧ ಸ್ಥಾನವಾಗಿರುವನು; ಆದರೆ ಇಸ್ರಾಯೇಲಿನ ಎರಡು ಮನೆಗಳಿಗೆ ಎಡವುವ ಕಲ್ಲು, ಮುಗ್ಗರಿಸುವ ಬಂಡೆಯು ಮತ್ತು ಯೆರೂ ಸಲೇಮಿನ ನಿವಾಸಿಗಳಿಗೆ ಬಲೆಯೂ ಬೋನೂ ಆಗಿರುವನು.

Isaiah 8:14 (UKJV) And he shall be for a sanctuary; but for a stone of stumbling and for a rock of offence to both the houses of Israel, for a animal trap and for a snare to the inhabitants of Jerusalem.

12ಇವರು ಯಾವದನ್ನು ಒಪ್ಪಂದ ಎಂದು ಹೇಳುತ್ತಾರೋ ನೀವು ಅದನ್ನು ಒಪ್ಪಂದವೆನ್ನಬೇಡಿರಿ; ಅವರ ಭಯಕ್ಕೆ ನೀವು ಭಯಪಡಬೇಡಿರಿ, ಇಲ್ಲವೆ ಹೆದರಬೇಡಿರಿ.

13ಸೈನ್ಯಗಳ ಕರ್ತನನ್ನೇ ಪ್ರತಿಷ್ಠೆಪಡಿಸಿ ಕೊಳ್ಳಿರಿ; ಆತನೇ ನಿಮ್ಮ ಭಯವೂ ಭಯಂಕರನೂ ಆಗಿರಲಿ.

14ಆತನೇ ಪರಿಶುದ್ಧ ಸ್ಥಾನವಾಗಿರುವನು; ಆದರೆ ಇಸ್ರಾಯೇಲಿನ ಎರಡು ಮನೆಗಳಿಗೆ ಎಡವುವ ಕಲ್ಲು, ಮುಗ್ಗರಿಸುವ ಬಂಡೆಯು ಮತ್ತು ಯೆರೂ ಸಲೇಮಿನ ನಿವಾಸಿಗಳಿಗೆ ಬಲೆಯೂ ಬೋನೂ ಆಗಿರುವನು.

15ಅವರಲ್ಲಿ ಅನೇಕರು ಎಡವಿಬಿದ್ದು, ಹೊಡೆಯಲ್ಪಟ್ಟು ಬಲೆಗೆ ಸಿಕ್ಕಿ ಬೀಳುವರು.

16ಸಾಕ್ಷಿಯನ್ನು ಕಟ್ಟಿಡು, ನನ್ನ ಶಿಷ್ಯರೊಳಗೆ ನ್ಯಾಯ ಪ್ರಮಾಣವನ್ನು ಮುದ್ರಿಸು.

Kannada Bible (Old Version), Bible Society of India.