3ನಿಮ್ಮ ನಂಬಿಕೆಗೆ ಆಗುವ ಪರಿಶೋಧನೆಯು ತಾಳ್ಮೆಯನ್ನುಂಟು ಮಾಡುತ್ತದೆಂದು ನೀವು ತಿಳಿಯಿರಿ.
4ಆ ತಾಳ್ಮೆಯು ಸಿದ್ದಿಗೆ ಬಂದಾಗ ನೀವು ಸಂಪೂರ್ಣರೂ ಸಿದ್ಧವಾದವರೂ ಯಾವದರ ಲ್ಲಿಯೂ ಕಡಿಮೆಯಿಲ್ಲದವರೂ ಆಗಿರುವಿರಿ.
5ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆ ಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲ ರಿಗೂ ಉದಾರ ಮನಸ್ಸಿನಿಂದ ಕೊಡುವಾತನಾಗಿದ್ದಾನೆ.
6ಆದರೆ ಅವನು ಸ್ವಲ್ಪವೂ ಸಂದೇಹ ಪಡದೆ ನಂಬಿಕೆ ಯಲ್ಲಿ ಕೇಳಿಕೊಳ್ಳಲಿ. ಯಾಕಂದರೆ ಸಂದೇಹಪಡುವ ವನು ಗಾಳಿಯಿಂದ ಬಡಿಯಲ್ಪಟ್ಟ ಸಮುದ್ರದ ತೆರೆ ಯಂತೆ ಅಲೆದಾಡುತ್ತಿರುವನು.
7ಆ ಮನುಷ್ಯನು ತಾನು ಕರ್ತನಿಂದ ಏನಾದರೂ ಹೊಂದುವೆನೆಂದು ಭಾವಿಸದೆ ಇರಲಿ.