6ಆದರೆ ಅವನು ಸ್ವಲ್ಪವೂ ಸಂದೇಹ ಪಡದೆ ನಂಬಿಕೆ ಯಲ್ಲಿ ಕೇಳಿಕೊಳ್ಳಲಿ. ಯಾಕಂದರೆ ಸಂದೇಹಪಡುವ ವನು ಗಾಳಿಯಿಂದ ಬಡಿಯಲ್ಪಟ್ಟ ಸಮುದ್ರದ ತೆರೆ ಯಂತೆ ಅಲೆದಾಡುತ್ತಿರುವನು.
7ಆ ಮನುಷ್ಯನು ತಾನು ಕರ್ತನಿಂದ ಏನಾದರೂ ಹೊಂದುವೆನೆಂದು ಭಾವಿಸದೆ ಇರಲಿ.
8ಎರಡು ಮನಸ್ಸುಳ್ಳವನು ತನ್ನ ಮಾರ್ಗಗಳ ಲ್ಲೆಲ್ಲಾ ಚಂಚಲನಾಗಿದ್ದಾನೆ.
9ಹೀನಸ್ಥಿತಿಯಲ್ಲಿರುವ ಸಹೋದರನು ತಾನು ಉನ್ನತ ಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ;
10ಐಶ್ವರ್ಯ ವಂತನಾದ ಸಹೋದರನು ತಾನು ದೀನಸ್ಥಿತಿಗೆ ಬಂದೆ ನೆಂದು ಉಲ್ಲಾಸಪಡಲಿ. ಆದರೆ ಐಶ್ವರ್ಯವಂತನು ಹುಲ್ಲಿನ ಹೂವಿನಂತೆ ಗತಿಸಿ ಹೋಗುವನು.