ಯಾಕೋಬ್ 3

ಅದು ಮೇಲಣಿಂದ ಬಂದ ಜ್ಞಾನವಲ್ಲ; ಅದು ಭೂಸಂಬಂಧ ವಾದದ್ದು, ಪ್ರಾಕೃತಭಾವವಾದದ್ದು, ದೆವ್ವಗಳಿಗೆ ಸಂಬಂಧಪಟ್ಟದ್ದು.

James 3:15 (UKJV) This wisdom descends not from above, but is earthly, sensual, devilish.

13ನಿಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಯೋಗ್ಯವಾಗಿ ನಡೆದುಕೊಂಡು ಜ್ಞಾನದ ಸಾತ್ವಿಕತ್ವದಲ್ಲಿ ತನ್ನ ಕ್ರಿಯೆಗಳನ್ನು ತೋರಿಸಲಿ.

14ಆದರೆ ಕಹಿಯಾದ ಹಗೆತನ ಮತ್ತು ಜಗಳ ನಿಮ್ಮ ಹೃದಯ ಗಳೊಳಗೆ ಇರುವಲ್ಲಿ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ.

15ಅದು ಮೇಲಣಿಂದ ಬಂದ ಜ್ಞಾನವಲ್ಲ; ಅದು ಭೂಸಂಬಂಧ ವಾದದ್ದು, ಪ್ರಾಕೃತಭಾವವಾದದ್ದು, ದೆವ್ವಗಳಿಗೆ ಸಂಬಂಧಪಟ್ಟದ್ದು.

16ಹೊಟ್ಟೇಕಿಚ್ಚೂ ಜಗಳವೂ ಇರುವ ಕಡೆ ಗಲಿಬಿಲಿಯೂ ಸಕಲವಿಧವಾದ ಕೆಟ್ಟ ಕೃತ್ಯವೂ ಇರುವವು.

17ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.

Kannada Bible (Old Version), Bible Society of India.