ಯಾಕೋಬ್ 3

ಹಡಗುಗಳನ್ನು ಸಹ ನೋಡಿರಿ. ಅವು ಬಹು ದೊಡ್ಡವಾಗಿದ್ದರೂ ಬಲವಾದ ಗಾಳಿಯಿಂದ ಬಡಿಸಿ ಕೊಂಡು ಹೋಗುತ್ತವೆ. ಆದಾಗ್ಯೂ ಬಹು ಸಣ ಚುಕಾಣಿಯಿಂದ ಅವುಗಳನ್ನು ನಡಿಸುವವನು ತನ್ನ ಮನಸ್ಸಿಗೆ ಬಂದ ಕಡೆಗೆ ತಿರುಗಿಸುತ್ತಾನೆ.

James 3:4 (UKJV) Behold also the ships, which though they be so great, and are driven of fierce winds, yet are they turned about with a very small helm, anywhere the governor decides.

2ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ ಅವನು ಪರಿ ಪೂರ್ಣನೂ ತನ್ನ ದೇಹವನ್ನೆಲ್ಲಾ ಸ್ವಾಧೀನಪಡಿಸಿ ಕೊಳ್ಳುವದಕ್ಕೆ ಸಮರ್ಥನೂ ಆಗಿದ್ದಾನೆ.

3ಇಗೋ, ಕುದುರೆಗಳು ನಮಗೆ ವಿಧೇಯವಾಗುವ ಹಾಗೆ ಅವು ಗಳ ಬಾಯಿಗೆ ಕಡಿವಾಣ ಹಾಕುತ್ತೇವಲ್ಲಾ; ಆಗ ಅವುಗಳ ದೇಹವನ್ನೆಲ್ಲಾ ತಿರುಗಿಸುವದಕ್ಕೆ ಆಗುತ್ತದೆ.

4ಹಡಗುಗಳನ್ನು ಸಹ ನೋಡಿರಿ. ಅವು ಬಹು ದೊಡ್ಡವಾಗಿದ್ದರೂ ಬಲವಾದ ಗಾಳಿಯಿಂದ ಬಡಿಸಿ ಕೊಂಡು ಹೋಗುತ್ತವೆ. ಆದಾಗ್ಯೂ ಬಹು ಸಣ ಚುಕಾಣಿಯಿಂದ ಅವುಗಳನ್ನು ನಡಿಸುವವನು ತನ್ನ ಮನಸ್ಸಿಗೆ ಬಂದ ಕಡೆಗೆ ತಿರುಗಿಸುತ್ತಾನೆ.

5ಹಾಗೆಯೇ ನಾಲಿಗೆಯು ಕೂಡ ಚಿಕ್ಕ ಅಂಗವಾಗಿದ್ದರೂ ದೊಡ್ಡ ಕಾರ್ಯಗಳನ್ನು ಕೊಚ್ಚಿಕೊಳ್ಳುತ್ತದೆ. ಇಗೋ, ಎಷ್ಟು ಕೊಂಚ ಕಿಚ್ಚು ದೊಡ್ಡ ಕಾಡನ್ನು ಸುಡುತ್ತದೆ ನೋಡಿರಿ.

6ನಾಲಿಗೆಯು ಬೆಂಕಿಯೂ ದುಷ್ಟಲೋಕವೂ ಆಗಿದೆ. ಹೀಗೆ ಅದು ನಮ್ಮ ಅಂಗಗಳಲ್ಲಿ ಇದ್ದು ದೇಹವನ್ನೆಲ್ಲಾ ಹೊಲೆಮಾಡಿ ಪ್ರಕೃತಿಯ ಕ್ರಮಕ್ಕೆ ಬೆಂಕಿ ಹಚ್ಚುವ ಹಾಗೆಯೂ ನರಕದ ಬೆಂಕಿಯನ್ನು ಹಚ್ಚಿಕೊಳ್ಳುವ ದಾಗಿಯೂ ಇದೆ.

Kannada Bible (Old Version), Bible Society of India.