4ಬೆಳ್ಳಿಯಿಂದಲೂ ಬಂಗಾರದಿಂದಲೂ ಅದನ್ನು ಅಲಂಕರಿಸುತ್ತಾರೆ; ಮೊಳೆಗಳಿಂದಲೂ ಸುತ್ತಿಗೆ ಗಳಿಂದಲೂ ಚಲಿಸದ ಹಾಗೆ ಅದನ್ನು ಬಿಗಿಸುತ್ತಾರೆ.
5ಅವು ಖರ್ಜೂರ ಮರದಂತೆ ನೆಟ್ಟಗೆ ಇವೆ. ಅವು ಮಾತನಾಡುವದಿಲ್ಲ; ಅವುಗಳನ್ನು ಹೊತ್ತುಕೊಳ್ಳ ತಕ್ಕದ್ದು, ಅವು ನಡೆಯಲಾರವು. ಅವುಗಳಿಗೆ ಭಯ ಪಡಬೇಡಿರಿ. ಅವು ಕೆಟ್ಟದ್ದನ್ನು ಮಾಡಲಾರವು ಇಲ್ಲವೆ ಒಳ್ಳೇದು ಮಾಡುವದು ಸಹ ಅವುಗಳಲ್ಲಿಲ್ಲ.
6ಓ ಕರ್ತನೇ, ನಿನ್ನ ಹಾಗೆ ಯಾರೂ ಇಲ್ಲ; ನೀನು ಮಹೋ ತ್ತಮನು, ನಿನ್ನ ಹೆಸರು ಪರಾಕ್ರಮದಲ್ಲಿ ದೊಡ್ಡದು.
7ಓ ಜನಾಂಗಗಳ ಅರಸನೇ, ನಿನಗೆ ಭಯಪಡದವ ನಾರು? ಅದು ನಿನಗೆ ಸಲ್ಲತಕ್ಕದ್ದು; ಜನಾಂಗಗಳ ಎಲ್ಲಾ ಜ್ಞಾನಿಗಳಲ್ಲಿಯೂ ಅವುಗಳ ಎಲ್ಲಾ ರಾಜ್ಯಗ ಳಲ್ಲಿಯೂ ನಿನ್ನ ಹಾಗೆ ಯಾರೂ ಇಲ್ಲ.
8ಅವರು ಒಟ್ಟಾರೆ ಕ್ರೂರಿಗಳೂ ಮೂರ್ಖರೂ ಆಗಿದ್ದಾರೆ; ಮರವು ವ್ಯರ್ಥವಾದ ಬೋಧನೆಯಾಗಿವೆ.