ಯಿರ್ಮಿಯ 11

ನಾನು ನಿಮ್ಮ ತಂದೆಗಳಿಗೆ ನನ್ನ ಮಾತನ್ನು ಕೇಳಿರೆಂದು ಖಂಡಿತವಾಗಿ ಹೇಳಿದೆನು. ಅವರನ್ನು ಐಗುಪ್ತದೇಶದೊಳಗಿಂದ ಮೇಲೆ ಬರ ಮಾಡಿದ ದಿನ ಮೊದಲುಗೊಂಡು ಇಂದಿನವರೆಗೂ ಬೆಳಿಗ್ಗೆ ಎದ್ದು ಖಂಡಿತವಾಗಿ ಹೇಳಿದೆನು,

Jeremiah 11:7 (UKJV) For I earnestly protested unto your fathers in the day that I brought them up out of the land of Egypt, even unto this day, rising early and protesting, saying, Obey my voice.

5ಈ ದಿನ ಇರುವ ಹಾಗೆ ಹಾಲೂ ಜೇನೂ ಹರಿಯುವ ದೇಶವನ್ನು ಅವರಿಗೆ ಕೊಡುವದಕ್ಕೆ ನಿಮ್ಮ ತಂದೆಗಳಿಗೆ ಆಣೆ ಇಟ್ಟ ಪ್ರಮಾಣವನ್ನು ಈಡೇರಿಸುವೆನು ಎಂಬದೇ ಆಗ ನಾನು ಉತ್ತರಕೊಟ್ಟು--ಓ ಕರ್ತನೇ, ಹಾಗೆಯೇ ಆಗಲಿ ಅಂದೆನು.

6ತರುವಾಯ ಕರ್ತನು ನನಗೆ ಹೇಳಿದ್ದೇನಂದರೆ--ಈ ಮಾತುಗಳನ್ನೆಲ್ಲಾ ಯೆಹೂದದ ಪಟ್ಟಣಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಸಾರಿ ಹೇಳು, ಹೇಗಂದರೆ--ಈ ಒಡಂಬಡಿಕೆಯ ಮಾತುಗಳನ್ನು ಕೇಳಿ ಅವುಗಳನ್ನು ಮಾಡಿರಿ.

7ನಾನು ನಿಮ್ಮ ತಂದೆಗಳಿಗೆ ನನ್ನ ಮಾತನ್ನು ಕೇಳಿರೆಂದು ಖಂಡಿತವಾಗಿ ಹೇಳಿದೆನು. ಅವರನ್ನು ಐಗುಪ್ತದೇಶದೊಳಗಿಂದ ಮೇಲೆ ಬರ ಮಾಡಿದ ದಿನ ಮೊದಲುಗೊಂಡು ಇಂದಿನವರೆಗೂ ಬೆಳಿಗ್ಗೆ ಎದ್ದು ಖಂಡಿತವಾಗಿ ಹೇಳಿದೆನು,

8ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ; ತಮ್ಮ ಕೆಟ್ಟ ಹೃದಯದ ಕಲ್ಪನೆಯಂತೆ ನಡಕೊಂಡರು; ಆದದರಿಂದ ಅವರು ಮಾಡಬೇಕೆಂದು ನಾನು ಆಜ್ಞಾಪಿಸಿದಂಥ, ಅವರು ಮಾಡುವಂಥ, ಈ ಒಡಂಬಡಿಕೆಯ ಮಾತು ಗಳನ್ನೆಲ್ಲಾ ಅವರ ಮೇಲೆ ಬರಮಾಡುವೆನು.

9ಇದಲ್ಲದೆ, ಕರ್ತನು ನನಗೆ ಹೇಳಿದ್ದೇನಂದರೆ-- ಯೆಹೂದದ ಮನುಷ್ಯರಲ್ಲಿಯೂ ಯೆರೂಸಲೇಮಿನ ನಿವಾಸಿಗಳಲ್ಲಿಯೂ ಒಳಸಂಚು ಕಂಡು ಬಂದಿದೆ.

Kannada Bible (Old Version), Bible Society of India.