ಯಿರ್ಮಿಯ 18

ಅವನು ಮಣ್ಣಿನಿಂದ ಮಾಡಿದ ಪಾತ್ರೆ ಕುಂಬಾರನ ಕೈಯಲ್ಲಿ ಕೆಟ್ಟುಹೋಯಿತು; ಆಗ ಕುಂಬಾರನಿಗೆ ಒಳ್ಳೇದೆಂದು ತೋರುವ ಪ್ರಕಾರ ಅದನ್ನು ಮತ್ತೊಂದು ಪಾತ್ರೆ ಯನ್ನಾಗಿ ಮಾಡಿದನು.

Jeremiah 18:4 (UKJV) And the vessel that he made of clay was ruined in the hand of the potter: so he made it again another vessel, as seemed good to the potter to make it.

2ಎದ್ದು ಕುಂಬಾರನ ಮನೆಗೆ ಇಳಿದು ಹೋಗು; ಅಲ್ಲಿ ನಿನಗೆ ನನ್ನ ವಾಕ್ಯಗಳನ್ನು ಕೇಳಮಾಡುವೆನು ಎಂಬದೇ.

3ಆಗ ನಾನು ಕುಂಬಾರನ ಮನೆಗೆ ಇಳಿದುಹೋದೆನು; ಇಗೋ, ಅವನು ಚಕ್ರದ ಮೇಲೆ ಕೆಲಸಮಾಡುತ್ತಿದ್ದನು.

4ಅವನು ಮಣ್ಣಿನಿಂದ ಮಾಡಿದ ಪಾತ್ರೆ ಕುಂಬಾರನ ಕೈಯಲ್ಲಿ ಕೆಟ್ಟುಹೋಯಿತು; ಆಗ ಕುಂಬಾರನಿಗೆ ಒಳ್ಳೇದೆಂದು ತೋರುವ ಪ್ರಕಾರ ಅದನ್ನು ಮತ್ತೊಂದು ಪಾತ್ರೆ ಯನ್ನಾಗಿ ಮಾಡಿದನು.

5ಆಗ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--

6ಓ ಇಸ್ರಾಯೇಲಿನ ಮನೆತನದ ವರೇ, ನಾನು ಈ ಕುಂಬಾರನ ಹಾಗೆ ನಿಮಗೆ ಮಾಡ ಕೂಡದೋ ಎಂದು ಕರ್ತನು ಅನ್ನುತ್ತಾನೆ. ಇಗೋ, ಕುಂಬಾರನ ಕೈಯಲ್ಲಿ ಮಣ್ಣು ಹೇಗೋ ಹಾಗೆಯೇ ಓ ಇಸ್ರಾಯೇಲಿನ ಮನೆತನದವರೇ, ನನ್ನ ಕೈಯಲ್ಲಿ ನೀವು ಇದ್ದೀರಿ.

Kannada Bible (Old Version), Bible Society of India.