ಯಿರ್ಮಿಯ 2

ಇದಲ್ಲದೆ ನಿನ್ನ ಸೆರಗುಗಳಲ್ಲಿ ಅಪರಾಧವಿಲ್ಲದ ಬಡಪ್ರಾಣಿಗಳ ರಕ್ತವು ಸಿಕ್ಕಿದೆ; ಅಂತರಂಗದ ಶೋಧನೆಯಿಂದಲ್ಲ, ಆದರೆ ಇವರೆಲ್ಲರ ಮೇಲೆಯೇ ಅದನ್ನು ಕಂಡಿದ್ದೇನೆ.

Jeremiah 2:34 (UKJV) Also in your skirts is found the blood of the souls of the poor innocent persons: I have not found it by secret search, but upon all these.

32ಯುವತಿಯು ತನ್ನ ಆಭರಣಗಳನ್ನೂ ಮದಲಗಿತ್ತಿಯು ತನ್ನ ಒಡ್ಯಾಣವನ್ನೂ ಮರೆತುಬಿಡುವಳೋ? ಆದಾಗ್ಯೂ ನನ್ನ ಜನರು ಲೆಕ್ಕವಿಲ್ಲದಷ್ಟು ದಿನಗಳು ನನ್ನನ್ನು ಮರೆತುಬಿಟ್ಟಿದ್ದಾರೆ.

33ಪ್ರೀತಿಯನ್ನು ಹುಡುಕುವ ಹಾಗೆ ನಿನ್ನ ಮಾರ್ಗವನ್ನು ಯಾಕೆ ಚಂದ ಮಾಡಿಕೊಳ್ಳುತ್ತೀ? ಕೆಟ್ಟ ಹೆಂಗಸರಿಗೂ ನಿನ್ನ ಮಾರ್ಗವನ್ನು ಕಲಿಸಿದ್ದೀ.

34ಇದಲ್ಲದೆ ನಿನ್ನ ಸೆರಗುಗಳಲ್ಲಿ ಅಪರಾಧವಿಲ್ಲದ ಬಡಪ್ರಾಣಿಗಳ ರಕ್ತವು ಸಿಕ್ಕಿದೆ; ಅಂತರಂಗದ ಶೋಧನೆಯಿಂದಲ್ಲ, ಆದರೆ ಇವರೆಲ್ಲರ ಮೇಲೆಯೇ ಅದನ್ನು ಕಂಡಿದ್ದೇನೆ.

35ಆದಾಗ್ಯೂ ನೀನು--ನಾನು ನಿರಪರಾಧಿಯಾಗಿರುವ ಕಾರಣ ನಿಶ್ಚಯವಾಗಿ ಆತನ ಕೋಪವು ನನ್ನನ್ನು ಬಿಟ್ಟು ತಿರುಗುವದೆಂದು ಹೇಳುತ್ತೀ; ನಾನು ಪಾಪ ಮಾಡಲಿಲ್ಲವೆಂದು ನೀನು ಹೇಳುವದ ರಿಂದ ಇಗೋ, ನಾನು ನಿನಗೆ ನ್ಯಾಯತೀರಿಸುವೆನು.

36ನಿನ್ನ ಮಾರ್ಗವನ್ನು ಬೇರೆಮಾಡಿಕೊಳ್ಳುವಷ್ಟು ಏಕೆ ತಿರುಗಾಡುತ್ತೀ? ನೀನು ಅಶ್ಶೂರಿನ ನಿಮಿತ್ತ ನಾಚಿಕೆ ಪಟ್ಟ ಹಾಗೆ ಐಗುಪ್ತದ ನಿಮಿತ್ತವೂ ನಾಚಿಕೆಪಡುವಿ.

Kannada Bible (Old Version), Bible Society of India.