14ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಾನು ಈ ಎಲ್ಲಾ ಜನಾಂಗಗಳ ಕುತ್ತಿಗೆಗಳ ಮೇಲೆ ಅವರು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ಸೇವೆ ಮಾಡುವ ಹಾಗೆ ಕಬ್ಬಿಣದ ನೊಗವನ್ನು ಇಟ್ಟಿದ್ದೇನೆ; ಅವರು ಅವನಿಗೆ ಸೇವೆ ಮಾಡುವರು; ಭೂಮಿಯ ಮೃಗಗಳನ್ನು ಸಹ ಅವನಿಗೆ ಕೊಟ್ಟಿದ್ದೇನೆ.
15ಪ್ರವಾದಿಯಾದ ಯೆರೆವಿಾಯನು ಪ್ರವಾದಿಯಾದ ಹನನ್ಯನಿಗೆ ಹೇಳಿದ್ದೇನಂದರೆ--ಹನ ನ್ಯನೇ, ಕೇಳು; ಕರ್ತನು ನಿನ್ನನ್ನು ಕಳುಹಿಸಲಿಲ್ಲ; ನೀನು ಈ ಜನರನ್ನು ಸುಳ್ಳಿನಲ್ಲಿ ನಂಬಿಕೆ ಇಡುವಂತೆ ಮಾಡುತ್ತೀ.
16ಆದದರಿಂದ ಕರ್ತನು ಹೀಗೆ ಹೇಳು ತ್ತಾನೆಇಗೋ, ನಾನು ನಿನ್ನನ್ನು ಭೂಮಿಯ ಮೇಲಿನಿಂದ ಬಿಸಾಡಿ ಬಿಡುತ್ತೇನೆ; ಈ ವರುಷ ನೀನು ಸಾಯುವಿ; ನೀನು ಕರ್ತನಿಗೆ ವಿರೋಧವಾಗಿ ದ್ರೋಹ ಬಗೆದಿದ್ದೀ ಅಂದನು.
17ಹಾಗೆಯೇ ಹನನ್ಯನು ಅದೇ ವರುಷದಲ್ಲಿ ಏಳನೇ ತಿಂಗಳಲ್ಲಿ ಸತ್ತನು.