11 ಆ ಕಾಲದಲ್ಲಿ ನಾನು ಇಸ್ರಾಯೇಲಿನ ಸಮಸ್ತ ಕುಟುಂಬಗಳಿಗೆ ದೇವರಾಗಿರು ವೆನು; ಅವರು ನನಗೆ ಜನರಾಗಿರುವರು ಎಂದು ಕರ್ತನು ಅನ್ನುತ್ತಾನೆ.
2ಕರ್ತನು ಹೀಗೆ ಹೇಳುತ್ತಾನೆ--ನಾನು ಅವರಿಗೆ ವಿಶ್ರಾಂತಿ ಕೊಡುವದಕ್ಕೆ ಹೋಗಲಾಗಿ ಕತ್ತಿಗೆ ತಪ್ಪಿಸಿಕೊಂಡ ಇಸ್ರಾಯೇಲಿನ ಜನರಿಗೆ ಅರಣ್ಯ ದಲ್ಲಿ ದಯೆ ದೊರಕಿತು.
3ಹಿಂದಿನಂತೆ ಕರ್ತನು ಬಂದು ನನಗೆ ಕಾಣಿಸಿಕೊಂಡು--ಹೌದು, ಶಾಶ್ವತವಾದ ಪ್ರೀತಿ ಯಿಂದ ನಿನ್ನನ್ನು ಪ್ರೀತಿ ಮಾಡಿದ್ದೇನೆ; ಆದದರಿಂದ ಪ್ರೀತಿ ದಯೆಗಳಿಂದ ನಿನ್ನನ್ನು ಎಳೆದಿದ್ದೇನೆ.
4ಇಸ್ರಾ ಯೇಲಿನ ಕನ್ಯಾಸ್ತ್ರೀಯೇ, ನೀನು ಕಟ್ಟಲ್ಪಟ್ಟಿರುವ ಹಾಗೆ ತಿರುಗಿ ನಿನ್ನನ್ನು ಕಟ್ಟುವೆನು; ನಿನ್ನ ದಮ್ಮಡಿಗಳಿಂದ ತಿರುಗಿ ನಿನ್ನನ್ನು ಅಲಂಕರಿಸಿಕೊಂಡು ಸಂತೋಷಪಡು ವವರ ನಾಟ್ಯದಲ್ಲಿ ಹೊರಡುವಿ.
5ಸಮಾರ್ಯದ ಪರ್ವ ತಗಳಲ್ಲಿ ತಿರುಗಿ ದ್ರಾಕ್ಷೇಗಿಡಗಳನ್ನು ನೆಡುವಿ; ನೆಡು ವವರು ನೆಟ್ಟು ಸಾಧಾರಣವಾದವುಗಳಂತೆ ಫಲ ಅನುಭ ವಿಸುವರು.