1ನೆಬೂಕದ್ನೆಚ್ಚರನ ಹದಿನೆಂಟನೇ ವರುಷವಾಗಿದ್ದ, ಚಿದ್ಕೀಯನ ಹತ್ತನೇ ವರುಷದಲ್ಲಿ ಯೆರೆವಿಾಯನಿಗೆ ಕರ್ತನಿಂದ ಉಂಟಾದ ವಾಕ್ಯವು.
2ಆಗ ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮಿಗೆ ಮುತ್ತಿಗೆ ಹಾಕುತ್ತಿತ್ತು; ಪ್ರವಾದಿಯಾದ ಯೆರೆವಿಾಯನು ಯೆಹೂದದ ಅರಸನ ಮನೆಯಲ್ಲಿರುವ ಸೆರೆಮನೆಯ ಅಂಗಳದಲ್ಲಿ ಮುಚ್ಚಲ್ಪಟ್ಟನು.
3ಯೆಹೂದದ ಅರಸನಾದ ಚಿದ್ಕೀಯನು ಯೆರೆವಿಾಯನಿಗೆ--ಕರ್ತನು ಹೇಳುವ ದೇನಂದರೆ--ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈಯಲ್ಲಿ ಕೊಡುತ್ತೇನೆ;
4ಅವನು ಅದನ್ನು ವಶಪಡಿಸಿಕೊಳ್ಳುವನು; ಯೆಹೂದದ ಅರಸನಾದ ಚಿದ್ಕೀಯನು ಕಸ್ದೀಯರ ಕೈಗೆ ತಪ್ಪಿಸಿಕೊಳ್ಳದೆ ನಿಶ್ಚಯ ವಾಗಿ ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವನು, ಸಾಕ್ಷಾತ್ತಾಗಿ ಅವನ ಸಂಗಡ ಮಾತನಾಡುವನು; ಅವನ ಕಣ್ಣುಗಳು ಅವನ ಕಣ್ಣುಗಳನ್ನು ನೋಡುವವು.