ಯಿರ್ಮಿಯ 4

ಓ ಇಸ್ರಾಯೇಲೇ, ನೀನು ತಿರುಗಿಕೊಂಡರೆ ನನ್ನ ಬಳಿಗೆ ತಿರುಗಿಕೋ ಎಂದು ಕರ್ತನು ಅನ್ನುತ್ತಾನೆ; ನೀನು ನಿನ್ನ ಅಸಹ್ಯಗಳನ್ನು ನನ್ನ ಎದುರಿನಿಂದ ತೊಲಗಿಸಿದರೆ ಕದಲದೆ ಇರುವಿ.

Jeremiah 4:1 (UKJV) If you will return, O Israel, says the LORD, return unto me: and if you will put away yours abominations out of my sight, then shall you not remove.

1ಓ ಇಸ್ರಾಯೇಲೇ, ನೀನು ತಿರುಗಿಕೊಂಡರೆ ನನ್ನ ಬಳಿಗೆ ತಿರುಗಿಕೋ ಎಂದು ಕರ್ತನು ಅನ್ನುತ್ತಾನೆ; ನೀನು ನಿನ್ನ ಅಸಹ್ಯಗಳನ್ನು ನನ್ನ ಎದುರಿನಿಂದ ತೊಲಗಿಸಿದರೆ ಕದಲದೆ ಇರುವಿ.

2ನೀನು ಸತ್ಯದಿಂದಲೂ ನ್ಯಾಯದಿಂದಲೂ ನೀತಿ ಯಿಂದಲೂ ಕರ್ತನ ಜೀವದಾಣೆ ಎಂದು ಪ್ರಮಾಣಮಾಡುವಿ; ಆಗ ಜನಾಂಗಗಳು ಆತನಲ್ಲಿ ಆಶೀರ್ವದಿಸಿ ಕೊಳ್ಳುವವು; ಮತ್ತು ಆತನಲ್ಲಿ ಹೊಗಳಿಕೊಳ್ಳುವವು.

3ಕರ್ತನು ಯೆಹೂದದವರಿಗೂ ಯೆರೂಸಲೇಮಿ ನವರಿಗೂ ಹೀಗೆ ಹೇಳುತ್ತಾನೆ--ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಮನುಷ್ಯರೇ, ನಿಮ್ಮ ಬಂಜರು ಭೂಮಿಯನ್ನು ಉಳಿರಿ; ಮುಳ್ಳುಗಳಲ್ಲಿ ಬೀಜ ಬಿತ್ತಬೇಡಿರಿ.

Kannada Bible (Old Version), Bible Society of India.