19ಅರೋಯೇರಿನ ನಿವಾಸಿಯೇ, ದಾರಿಯ ಬಳಿಯಲ್ಲಿ ನಿಂತು ದೃಷ್ಟಿಸು; ಓಡಿಹೋಗು ವವನನ್ನೂ ತಪ್ಪಿಸಿಕೊಳ್ಳುವವನನ್ನೂ ಕೇಳು, ಏನಾಯಿ ತೆಂದು ಹೇಳು.
20ಮೋವಾಬು ನಾಚಿಕೆಪಡುತ್ತದೆ; ಮುರಿದು ಹೋಯಿತು; ಗೋಳಾಡಿರಿ, ಕೂಗಿರಿ; ಮೋವಾಬು ಸೂರೆಯಾಯಿತೆಂದು ಅರ್ನೋನಿನಲ್ಲಿ ಅದನ್ನು ತಿಳಿಸಿರಿ.
21ಇದಲ್ಲದೆ ಬೈಲು ಸೀಮೆಯ ಮೇಲೆ ನ್ಯಾಯತೀರ್ವಿಕೆ ಬಂತು; ಹೋಲೋನಿನ ಮೇಲೆಯೂ ಯಾಚದ ಮೇಲೆಯೂ ಮೆಫಾತ್‌ನ ಮೇಲೆಯೂ
22ದೀಬೋನಿನ ಮೇಲೆಯೂ ನೇಬೋನಿನ ಮೇಲೆಯೂ ಬೇತ್‌ದಿಬ್ಲಾತಯಿಮ್‌ನ ಮೇಲೆಯೂ
23ಕಿರ್ಯಾತಯಾಮಿನ ಮೇಲೆಯೂ ಬೇತ್‌ಗಾಮುಲಿನ ಮೇಲೆಯೂ ಬೇತ್‌ಮೆಯೋನಿನ ಮೇಲೆಯೂ