21ನಿನ್ನಿಂದ ಕುದುರೆಯನ್ನೂ ಅದರ ಮೇಲೆ ಹತ್ತಿದವನನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ರಥವನ್ನೂ ಅದರಲ್ಲಿ ಸವಾರಿ ಮಾಡುವವನನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ.
22ನಿನ್ನಿಂದ ಗಂಡಸರನ್ನೂ ಹೆಂಗಸರನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ. ನಿನ್ನಿಂದ ಕುರುಬನನ್ನೂ ಅವನ ಮಂದೆಯನ್ನು ಚೂರು ಚೂರಾಗಿ ಒಡೆದು ಬಿಡುತ್ತೇನೆ.
23ನಿನ್ನಿಂದ ಹಿರಿಯರನ್ನೂ ಕಿರಿಯರನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ಯೌವನಸ್ಥನನ್ನೂ ಕನ್ನಿಕೆಯನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ಒಕ್ಕಲಿಗನನ್ನೂ ಅವನ ನೊಗದ ಎತ್ತುಗಳನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ಅಧಿಪತಿಗಳನ್ನೂ ಅಧಿಕಾರಿಗಳನ್ನೂ ಚೂರು ಚೂರಾಗಿ ಒಡೆದುಬಿಡು ತ್ತೇನೆ.
24ಬಾಬೆಲಿಗೂ ಕಸ್ದೀಯರ ನಿವಾಸಿಗಳೆಲ್ಲ ರಿಗೂ--ಅವರು ಚೀಯೋನಿನಲ್ಲಿ ನಿಮ್ಮ ಸನ್ನಿಧಿಯಲ್ಲಿ ಮಾಡಿದ ಕೇಡನ್ನೆಲ್ಲಾ ಸಲ್ಲಿಸುವೆನೆಂದು ಕರ್ತನು ಅನ್ನುತ್ತಾನೆ.
25ನಾಶಮಾಡುವ ಬೆಟ್ಟವೇ! ಭೂಮಿಯನ್ನೆಲ್ಲಾ ನಾಶಮಾಡುವಂಥಾದ್ದೇ! ಇಗೋ, ನಾನು ನಿನಗೆ ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ. ನಿನ್ನ ಮೇಲೆ ನನ್ನ ಕೈಯನ್ನು ಚಾಚಿ ಬಂಡೆಗಳ ಮೇಲಿನಿಂದ ನಿನ್ನನ್ನು ಹೊರಳಿಸಿ ನಿನ್ನನ್ನು ಸುಟ್ಟ ಬೆಟ್ಟವಾಗಿ ಮಾಡುತ್ತೇನೆ.