ಯಿರ್ಮಿಯ 51

ಕುರಿಮರಿಗಳ ಹಾಗೆ ಟಗರು ಗಳ ಹೋತಗಳ ಹಾಗೆ ಅವರನ್ನು ಕೊಲೆಗೆ ಇಳಿಸುವೆನು.

Jeremiah 51:40 (UKJV) I will bring them down like lambs to the slaughter, like rams with he goats.

38ಅವರು ಸಿಂಹಗಳ ಹಾಗೆ ಒಟ್ಟಾಗಿ ಗರ್ಜಿಸುವರು, ಸಿಂಹದ ಮರಿಗಳ ಹಾಗೆ ಶಬ್ದ ಮಾಡುವರು.

39ಅವರ ಉರಿಯಲ್ಲಿ ನಾನು ಅವರ ಔತಣವನ್ನು ಸಿದ್ಧಮಾಡುವೆನು; ಅವರು ಉಲ್ಲಾಸಿಸಿ ನಿತ್ಯವಾದ ನಿದ್ರೆಯನ್ನು ಮಾಡಿ ಎಚ್ಚರವಾಗದ ಹಾಗೆ ಅವರಿಗೆ ಅಮಲೇರಿಸುವೆನೆಂದು ಕರ್ತನು ಅನ್ನುತ್ತಾನೆ.

40ಕುರಿಮರಿಗಳ ಹಾಗೆ ಟಗರು ಗಳ ಹೋತಗಳ ಹಾಗೆ ಅವರನ್ನು ಕೊಲೆಗೆ ಇಳಿಸುವೆನು.

41ಶೇಷಕ್‌ ಹೇಗೆ ಹಿಡಿಯಲ್ಪಟ್ಟಿದೆ, ಸಮಸ್ತ ಭೂಮಿಯ ಹೊಗಳಿಕೆಯು ಆಶ್ಚರ್ಯಗೊಂಡಿದೆ; ಬಾಬೆಲ್‌ ಜನಾಂಗಗಳೊಳಗೆ ಹೀಗೆ ವಿಸ್ಮಯಗೊಳಗಾಯಿತು!

42ಬಾಬೆಲಿನ ಮೇಲೆ ಸಮುದ್ರವು ಬಂತು; ಅದರ ತೆರೆಗಳ ಸಮೂಹದಿಂದ ಮುಚ್ಚಲ್ಪಟ್ಟಿದೆ.

Kannada Bible (Old Version), Bible Society of India.