40ಕುರಿಮರಿಗಳ ಹಾಗೆ ಟಗರು ಗಳ ಹೋತಗಳ ಹಾಗೆ ಅವರನ್ನು ಕೊಲೆಗೆ ಇಳಿಸುವೆನು.
41ಶೇಷಕ್ ಹೇಗೆ ಹಿಡಿಯಲ್ಪಟ್ಟಿದೆ, ಸಮಸ್ತ ಭೂಮಿಯ ಹೊಗಳಿಕೆಯು ಆಶ್ಚರ್ಯಗೊಂಡಿದೆ; ಬಾಬೆಲ್ ಜನಾಂಗಗಳೊಳಗೆ ಹೀಗೆ ವಿಸ್ಮಯಗೊಳಗಾಯಿತು!
42ಬಾಬೆಲಿನ ಮೇಲೆ ಸಮುದ್ರವು ಬಂತು; ಅದರ ತೆರೆಗಳ ಸಮೂಹದಿಂದ ಮುಚ್ಚಲ್ಪಟ್ಟಿದೆ.
43ಅದರ ಪಟ್ಟಣಗಳು ಹಾಳಾದವು; ಅವು ಒಣನೆಲವೂ ಅಡವಿಯೂ ಯಾರೂ ವಾಸಮಾಡದೆ, ಮನುಷ್ಯನ ಮಗನು ಹಾದುಹೋಗದೆ ಇರುವ ದೇಶವೂ ಆಗಿವೆ.
44ನಾನು ಬಾಬೆಲಿನಲ್ಲಿರುವ ಬೇಲ್‌ನನ್ನು ದಂಡಿಸಿ ಅವನು ನುಂಗಿದ್ದನ್ನು ಅವನ ಬಾಯೊಳಗಿಂದ ಹೊರಗೆ ತರಿಸುವೆನು; ಇನ್ನು ಮೇಲೆ ಜನಾಂಗಗಳು ಅವನ ಬಳಿಗೆ ಪ್ರವಾಹವಾಗಿ ಬರುವದಿಲ್ಲ; ಹೌದು, ಬಾಬೆಲಿನ ಗೋಡೆ ಬೀಳುವದು.