8ಇಗೋ, ನೀವು ಪ್ರಯೋಜನವಿಲ್ಲದ ಸುಳ್ಳಾದ ಮಾತುಗಳಲ್ಲಿ ನಂಬಿಕೆ ಇಡುತ್ತೀರಿ.
9ಕಳ್ಳತನ ಹತ್ಯಹಾದರ ಇವುಗಳನ್ನು ನೀವು ನಡಿಸುವಿರೋ? ಸುಳ್ಳುಪ್ರಮಾಣವನ್ನು ಮಾಡಿ ಬಾಳನಿಗೆ ಧೂಪವನ್ನು ಸುಡುವಿರೋ? ನಿಮಗೆ ತಿಳಿಯದ ಬೇರೆ ದೇವರು ಗಳನ್ನು ಹಿಂಬಾಲಿಸಿ
10ಆಮೇಲೆ ಬಂದು ನನ್ನ ಹೆಸರಿನಲ್ಲಿ ಕರೆಯಲ್ಪಟ್ಟ ಈ ಆಲಯದಲ್ಲಿ ನನ್ನ ಮುಂದೆ ನಿಂತು ಕೊಂಡು--ನಾವು ಈ ಅಸಹ್ಯವಾದವುಗಳನ್ನೆಲ್ಲಾ ಮಾಡುವ ಹಾಗೆ ಒಪ್ಪಿಸಲ್ಪಟ್ಟಿದ್ದೇವೆಂದು ಹೇಳು ವಿರೋ?
11ನನ್ನ ಹೆಸರಿನಲ್ಲಿ ಕರೆಯಲ್ಪಟ್ಟ ಈ ಆಲಯವು ನಿಮ್ಮ ಕಣ್ಣುಗಳಲ್ಲಿ ಕಳ್ಳರ ಗವಿಯಾಯಿತೋ? ಇಗೋ, ನಾನೇ ಅದನ್ನು ನೋಡಿದ್ದೇನೆಂದು ಕರ್ತನು ಅನ್ನುತ್ತಾನೆ.
12ಆದರೆ ಈಗ ಶಿಲೋವಿನಲ್ಲಿದ್ದ ನನ್ನ ಸ್ಥಳಕ್ಕೆ ಅಂದರೆ ನಾನು ಮೊದಲು ನನ್ನ ಹೆಸರನ್ನು ಇಟ್ಟಲ್ಲಿಗೆ ಹೋಗಿರಿ; ಅದಕ್ಕೆ ನಾನು ನನ್ನ ಜನರಾದ ಇಸ್ರಾಯೇಲಿನ ಕೆಟ್ಟತನದ ನಿಮಿತ್ತ ಏನು ಮಾಡಿದೆನೆಂದು ನೋಡಿರಿ.