19ನಾವು ಹೇಗೆ ಹಾಳಾದೆವು, ನಾವು ದೇಶವನ್ನು ಬಿಟ್ಟದ್ದರಿಂದಲೂ ನಮ್ಮ ನಿವಾಸಗಳು ನಮ್ಮನ್ನು ಹೊರಗೆ ಹಾಕಿದ್ದರಿಂದಲೂ ಬಹಳವಾಗಿ ನಾಚಿಕೆಪಡುತ್ತೇವೆ ಎಂಬ ಗೋಳಾಟದ ಶಬ್ದವು ಚೀಯೋನಿನಿಂದ ಕೇಳಿ ಬಂತು.
20ಆದಾಗ್ಯೂ ಓ ಸ್ತ್ರೀಯರೇ, ಕರ್ತನ ವಾಕ್ಯವನ್ನು ಕೇಳಿರಿ. ನಿಮ್ಮ ಕಿವಿಯು ಆತನ ಬಾಯಿಯ ವಾಕ್ಯವನ್ನು ಅಂಗೀಕರಿಸಲಿ; ನಿಮ್ಮ ಕುಮಾರ್ತೆಯರಿಗೆ ಗೋಳಾಟವನ್ನೂ ನಿಮ್ಮ ನಿಮ್ಮ ನೆರೆಯವರಿಗೆ ಪ್ರಲಾಪವನ್ನೂ ಕಲಿಸಿರಿ.
21ಮರಣವು ನಮ್ಮ ಕಿಟಕಿಗಳೊಳಗೆ ಏರಿ ಬಂತು, ನಮ್ಮ ಅರಮನೆ ಗಳಲ್ಲಿ ಸೇರಿತು; ಹೊರಗಡೆ ಮಕ್ಕಳನ್ನೂ ಬೀದಿಗಳಲ್ಲಿ ಯೌವ್ವನಸ್ಥರನ್ನೂ ಕಡಿದು ಹಾಕುತ್ತದೆ.
22ಕರ್ತನು ಹೀಗೆ ಅನ್ನುತ್ತಾನೆ--ಮಾತನಾಡು, ಏನಂದರೆ ಮನು ಷ್ಯರ ಹೆಣಗಳು ಗೊಬ್ಬರದಂತೆ ಬಯಲಿನಲ್ಲಿ ಬೀಳು ವವು; ಧಾನ್ಯ ಕೊಯ್ಯುವವನು ಉಳಿಸಿದ ಕೈ ಹಿಡಿಯಂತೆ ಕೂಡಿಸುವವನಿಲ್ಲದೆ ಬೀಳುವವು.
23ಕರ್ತನು ಹೀಗೆ ಹೇಳುತ್ತಾನೆ--ಜ್ಞಾನಿಯು ತನ್ನ ಜ್ಞಾನದಲ್ಲಿ ಹೆಚ್ಚಳಪಡದಿರಲಿ; ಬಲಿಷ್ಟನು ತನ್ನ ಬಲ ದಲ್ಲಿ ಹೆಚ್ಚಳ ಪಡದಿರಲಿ; ಐಶ್ವರ್ಯವಂತನು ತನ್ನ ಐಶ್ವರ್ಯದಲ್ಲಿ ಹೆಚ್ಚಳಪಡದಿರಲಿ.