ಯಿರ್ಮಿಯ 9

ನಿನ್ನ ನಿವಾಸವು ಮೋಸದ ಮಧ್ಯದಲ್ಲಿ ಅದೆ; ಮೋಸದಿಂದಲೇ ನನ್ನನ್ನು ನಿರಾಕರಿಸು ತ್ತಾರೆಂದು ಕರ್ತನು ಅನ್ನುತ್ತಾನೆ.

Jeremiah 9:6 (UKJV) Yours habitation is in the midst of deceit; through deceit they refuse to know me, says the LORD.

4ನಿಮ್ಮ ನಿಮ್ಮ ನೆರೆಯವರಿಗೆ ಎಚ್ಚರಿಕೆಯಾಗಿರಿ; ಯಾವ ಸಹೋದರ ನಲ್ಲಾದರೂ ನಂಬಿಕೆ ಇಡಬೇಡಿರಿ; ಸಹೋದರರೆಲ್ಲರೂ ಸಂಪೂರ್ಣವಾಗಿ ಮೋಸಮಾಡುವರು, ನೆರೆಯವ ರೆಲ್ಲರು ಚಾಡಿಹೇಳುತ್ತಾ ತಿರುಗಾಡುವರು.

5ತಮ್ಮ ತಮ್ಮ ನೆರೆಯವರಿಗೆ ವಂಚನೆಮಾಡಿ ಸತ್ಯವನ್ನು ಮಾತಾ ಡರು; ಸುಳ್ಳುಗಳನ್ನು ಹೇಳುವದಕ್ಕೆ ಅವರು ತಮ್ಮ ನಾಲಿಗೆಗೆ ಬೋಧಿಸಿದ್ದಾರೆ. ಅಕ್ರಮ ಮಾಡುವದಕ್ಕೆ ಪ್ರಯಾಸಪಡುತ್ತಾರೆ.

6ನಿನ್ನ ನಿವಾಸವು ಮೋಸದ ಮಧ್ಯದಲ್ಲಿ ಅದೆ; ಮೋಸದಿಂದಲೇ ನನ್ನನ್ನು ನಿರಾಕರಿಸು ತ್ತಾರೆಂದು ಕರ್ತನು ಅನ್ನುತ್ತಾನೆ.

7ಆದದರಿಂದ ಸೈನ್ಯಗಳ ಕರ್ತನು ಹೇಳುವದೇ ನಂದರೆ--ಇಗೋ, ನಾನು ಅವರನ್ನು ಕರಗಿಸಿ ಶೋಧಿ ಸುತ್ತೇನೆ; ನನ್ನ ಜನರ ಮಗಳಿಗೋಸ್ಕರ ನಾನು ಹೇಗೆ ಮಾಡಲಿ?

8ಅವರ ನಾಲಿಗೆ ಎಸೆದ ಬಾಣದಂತಿದೆ, ಅದು ಮೋಸವನ್ನಾಡುತ್ತದೆ. ತನ್ನ ಬಾಯಿಂದ ತನ್ನ ನೆರೆಯವರ ಸಂಗಡ ಸಮಾಧಾನವಾಗಿ ಮಾತನಾಡಿ ಹೃದಯದಲ್ಲಿ ಅವನಿಗೆ ಹೊಂಚುಹಾಕುತ್ತಾನೆ.

Kannada Bible (Old Version), Bible Society of India.