ಯೋಬು 1

ಅಗೋ, ದೊಡ್ಡ ಗಾಳಿ ಬಂದು ಮನೆಯ ನಾಲ್ಕು ಮೂಲೆಗಳಿಗೆ ಹೊಡೆದದ್ದರಿಂದ ಅದು ಯೌವನಸ್ಥರ ಮೇಲೆ ಬಿತ್ತು; ಅವರು ಸತ್ತರು; ನಾನೊಬ್ಬನು ಮಾತ್ರ ನಿನಗೆ ತಿಳಿಸುವುದಕ್ಕೆ ತಪ್ಪಿಸಿಕೊಂಡೆನು ಅಂದನು.

Job 1:19 (UKJV) And, behold, there came a great wind from the wilderness, and stroke the four corners of the house, and it fell upon the young men, and they are dead; and I only am escaped alone to tell you.

17ಅವನು ಇನ್ನೂ ಮಾತ ನಾಡುತ್ತಿರಲು ಮತ್ತೊಬ್ಬನು ಬಂದು--ಕಸ್ದೀಯರು ಮೂರು ದಂಡುಗಳನ್ನು ಕಟ್ಟಿ, ಒಂಟೆಗಳ ಮೇಲೆ ಬಿದ್ದು, ಅವುಗಳನ್ನು ತಕ್ಕೊಂಡು ಸಂಹರಿಸಿದರು; ಹೌದು, ಸೇವಕರನ್ನು ಕತ್ತಿಯಿಂದ ಹೊಡೆದರು; ನಾನೊಬ್ಬನು ಮಾತ್ರ ನಿನಗೆ ತಿಳಿಸುವುದಕ್ಕೆ ತಪ್ಪಿಸಿ ಕೊಂಡೆನು ಅಂದನು.

18ಅವನು ಇನ್ನೂ ಮಾತನಾ ಡುತ್ತಿರಲು ಮತ್ತೊಬ್ಬನು ಬಂದು--ನಿನ್ನ ಕುಮಾರರೂ ಕುಮಾರ್ತೆಯರೂ ತಮ್ಮ ಹಿರಿಯವನ ಮನೆಯಲ್ಲಿ ತಿನ್ನುತ್ತಾ ದ್ರಾಕ್ಷಾರಸವನ್ನು ಕುಡಿಯುತ್ತಿರುವಲ್ಲಿ

19ಅಗೋ, ದೊಡ್ಡ ಗಾಳಿ ಬಂದು ಮನೆಯ ನಾಲ್ಕು ಮೂಲೆಗಳಿಗೆ ಹೊಡೆದದ್ದರಿಂದ ಅದು ಯೌವನಸ್ಥರ ಮೇಲೆ ಬಿತ್ತು; ಅವರು ಸತ್ತರು; ನಾನೊಬ್ಬನು ಮಾತ್ರ ನಿನಗೆ ತಿಳಿಸುವುದಕ್ಕೆ ತಪ್ಪಿಸಿಕೊಂಡೆನು ಅಂದನು.

20ಆಗ ಯೋಬನು ಎದ್ದು ತನ್ನ ನಿಲುವಂಗಿಯನ್ನು ಹರಿದು ತನ್ನ ತಲೆಬೋಳಿಸಿಕೊಂಡು ನೆಲಕ್ಕೆ ಬಿದ್ದು ಆರಾಧಿಸಿ

21ಬೆತ್ತಲೆಯಾಗಿ ನನ್ನ ತಾಯಿಯ ಗರ್ಭ ದಿಂದ ಹೊರಟು ಬಂದೆನು, ಬೆತ್ತಲೆಯಾಗಿ ತಿರುಗಿ ಹೋಗಬೇಕು. ಕರ್ತನು ಕೊಟ್ಟನು, ಕರ್ತನು ತಕ್ಕೊಂಡನು; ಕರ್ತನ ಹೆಸರಿಗೆ ಸ್ತೋತ್ರ ಅಂದನು.

Kannada Bible (Old Version), Bible Society of India.