ಯೋಬು 13

ಬಡಿಯಲ್ಪಟ್ಟ ಎಲೆಯನ್ನು ನಲಿಗಿಸುವಿಯೋ? ಒಣಗಿದ ಕೊಳೆಯನ್ನು ಬೆನ್ನಟ್ಟುವಿಯೋ?

Job 13:25 (UKJV) Will you break a leaf driven back and forth? and will you pursue the dry stubble?

23ನನ್ನ ಅಕ್ರಮಗಳೂ ಪಾಪಗಳೂ ಎಷ್ಟಿವೆ? ನನ್ನ ಅಪರಾಧವನ್ನೂ ಪಾಪವನ್ನೂ ನನಗೆ ತಿಳಿಯಪಡಿಸು.

24ಯಾಕೆ ನಿನ್ನ ಮುಖವನ್ನು ಮರೆಮಾಡುತ್ತೀ; ನನ್ನನ್ನು ನಿನ್ನ ಶತ್ರು ಎಂದು ಯಾಕೆ ಎಣಿಸುತ್ತೀ?

25ಬಡಿಯಲ್ಪಟ್ಟ ಎಲೆಯನ್ನು ನಲಿಗಿಸುವಿಯೋ? ಒಣಗಿದ ಕೊಳೆಯನ್ನು ಬೆನ್ನಟ್ಟುವಿಯೋ?

26ನನಗೆ ವಿರೋಧವಾಗಿ ಕಹಿಯಾದ ವುಗಳನ್ನು ಬರೆದುಕೊಂಡಿದ್ದೀ; ನನ್ನ ಯೌವನದ ಅಕ್ರಮಗಳನ್ನು ನನಗೆ ಬಾಧ್ಯವಾಗಿ ಕೊಡುತ್ತೀ.

27ನನ್ನ ಪಾದಗಳನ್ನು ಕೊಳದಲ್ಲಿಟ್ಟು ನನ್ನ ಹಾದಿಗಳನ್ನೆಲ್ಲಾ ಲಕ್ಷ್ಯವಿಟ್ಟು ನೋಡಿಕೊಳ್ಳುತ್ತೀ; ನನ್ನ ಪಾದಗಳ ಹಿಮ್ಮಡಿಗಳ ಮೇಲೆ ಗುರುತು ಹಾಕುತ್ತೀ.

Kannada Bible (Old Version), Bible Society of India.