ಯೋಬು 13

ನಾನು ಸರ್ವಶಕ್ತನ ಸಂಗಡ ಖಂಡಿತವಾಗಿ ಮಾತ ನಾಡುವೆನು, ದೇವರ ಸಂಗಡ ವಾದಿಸಲು ನನಗೆ ಮನಸ್ಸುಂಟು.

Job 13:3 (UKJV) Surely I would speak to the Almighty, and I desire to reason with God.

1ಇಗೋ, ನನ್ನ ಕಣ್ಣು ಎಲ್ಲಾ ನೋಡಿತು; ನನ್ನ ಕಿವಿ ಕೇಳಿ ಅದನ್ನು ಗ್ರಹಿಸಿಕೊಂಡಿತು.

2ನೀವು ತಿಳಿದುಕೊಳ್ಳುವ ಪ್ರಕಾರ ನಾನೂ ತಿಳಿದು ಕೊಂಡಿದ್ದೇನೆ; ನಾನು ನಿಮಗಿಂತ ಕಡಿಮೆಯಾದವನಲ್ಲ.

3ನಾನು ಸರ್ವಶಕ್ತನ ಸಂಗಡ ಖಂಡಿತವಾಗಿ ಮಾತ ನಾಡುವೆನು, ದೇವರ ಸಂಗಡ ವಾದಿಸಲು ನನಗೆ ಮನಸ್ಸುಂಟು.

4ಆದರೆ ನೀವು ಸುಳ್ಳನ್ನು ಕಲ್ಪಿಸುವವರು; ನೀವೆಲ್ಲರೂ ವ್ಯರ್ಥ ವೈದ್ಯರೇ.

5ನೀವು ಮೌನವಾಗಿಯೇ ಇದ್ದರೆ ಎಷ್ಟೋ ಒಳ್ಳೇದು! ಅದು ನಿಮಗೆ ಜ್ಞಾನವಾಗಿರತಕ್ಕದ್ದು.

Kannada Bible (Old Version), Bible Society of India.